ಮಂಡ್ಯ: ನವವಿವಾಹಿತ ಆತ್ಮಹತ್ಯೆ

ಮಂಡ್ಯ, ಆ.24: ಕೆಲ ದಿನಗಳ ಹಿಂದೆ ಮದುವೆಯಾಗಿದ್ದ ಕೆ.ಆರ್.ಪೇಟೆ ತಾಲೂಕಿನ ಕೈಗೋನಹಳ್ಳಿಯ ಪ್ರಸನ್ನಗೌಡ ಎಂಬಾತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಪ್ರಸನ್ನಗೌಡ ಚಿಕಿತ್ಸೆ ಫಲಕಾರಿಯಾಗದೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಈತ ಪಾಂಡವಪುರ ತಾಲೂಕು ನಳ್ಳೇನಹಳ್ಳಿಯ ಯುವತಿಯನ್ನು ಮದುವೆಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Next Story





