ಕೆಎಸ್ಸಾರ್ಟಿಸಿ ಬಸ್ ಗೆ ಕಾರು ಢಿಕ್ಕಿ: ಮೂವರು ಮೃತ್ಯು

ಬೆಂಗಳೂರು, ಆ.25: ಕೆಎಸ್ಸಾರ್ಟಿಸಿ ಬಸ್ ಗೆ ಕಾರು ಢಿಕ್ಕಿಯಾಗಿ ಕಾರಿ ನಲ್ಲಿದ್ದ ಮೂವರು ಮೃತಪಟ್ಟ ಘಟನೆ ಕನಕಪುರ ತಾಲೂಕಿನ ರಾಯರದೊಡ್ಡಿ ಗ್ರಾಮದಲ್ಲಿ ಇಂದು ಸಂಭವಿಸಿದೆ.
ಕಾರು ಚಾಲಕ ಮತ್ತು ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆದರೆ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೈಸೂರಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಸಾಂತನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





