Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುದ್ದಿಗೋಷ್ಠಿಯಲ್ಲಿ ಕೆಮ್ಮುತ್ತಿದ್ದ...

ಸುದ್ದಿಗೋಷ್ಠಿಯಲ್ಲಿ ಕೆಮ್ಮುತ್ತಿದ್ದ ನೇಪಾಳ ಪ್ರಧಾನಿಗೆ ನೀರು ನೀಡಿದ ಸುಷ್ಮಾ ಸ್ವರಾಜ್

ಅತಿಥಿ ಸತ್ಕಾರದಲ್ಲಿ ಮಾದರಿಯಾದ ವಿದೇಶಾಂಗ ವ್ಯವಹಾರಗಳ ಸಚಿವೆ

ವಾರ್ತಾಭಾರತಿವಾರ್ತಾಭಾರತಿ25 Aug 2017 3:22 PM IST
share
ಸುದ್ದಿಗೋಷ್ಠಿಯಲ್ಲಿ ಕೆಮ್ಮುತ್ತಿದ್ದ ನೇಪಾಳ ಪ್ರಧಾನಿಗೆ ನೀರು ನೀಡಿದ ಸುಷ್ಮಾ ಸ್ವರಾಜ್

ಹೊಸದಿಲ್ಲಿ,ಆ.25: ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದಾಗ ಕೆಮ್ಮತೊಡಗಿದ್ದ ನೇಪಾಲದ ಪ್ರಧಾನಿ ಶೇರ್ ಬಹಾದುರ್ ದೇವುಬಾ ಅವರಿಗೆ ಕುಡಿಯುವ ನೀರನ್ನು ಸ್ವತಃ ನೀಡುವ ಮೂಲಕ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರು ಆತಿಥೇಯರು ಹೇಗಿರಬೇಕು ಎನ್ನುವುದನ್ನು ತೋರಿಸಿದ್ದಾರೆ.

ಇಲ್ಲಿಯ ಹೈದರಾಬಾದ್ ಭವನದಲ್ಲಿ ವ್ಯಾಪಕ ದ್ವಿಪಕ್ಷೀಯ ಮಾತುಕತೆಗಳ ಬಳಿಕ ಉಭಯ ಪ್ರಧಾನಿಗಳು ಸುದ್ದಿಗೋಷ್ಠಿಯನ್ನು ಹಮ್ಮಿಕೊಂಡಿದ್ದರು. ದೇವುಬಾ ಸುದ್ದಿಗಾರ ರನ್ನುದ್ದೇಶಿಸಿ ತನ್ನ ಮಾತುಗಳನ್ನು ಮುಗಿಸುವ ಹಂತದಲ್ಲಿದ್ದಾಗ ಕೆಮ್ಮು ಪ್ರಾರಂಭವಾಗಿ ಧ್ವನಿಯು ಕರ್ಕಶವಾಗಿತ್ತು. ಕೆಮ್ಮುತ್ತಲೇ ಅವರು ಮಾತು ಮುಂದುವರಿಸಿದ್ದರು. ಮುಂದಿನ ಸಾಲಿನಲ್ಲಿ ಕುಳಿತಿದ್ದ ಸುಷ್ಮಾ ಅಧಿಕಾರಿಗಳಿಗಾಗಿ ಕಾಯದೇ ತನ್ನ ಆಸನದಿಂದ ಎದ್ದು ದೇವುಬಾರ ಬಳಿಗೆ ತೆರಳಿದರು. ಈ ವೇಳೆ ಮೋದಿ ತನ್ನೆದುರಿನ ಟೇಬಲ್‌ನಲ್ಲಿದ್ದ ನೀರಿನ ಜಾರ್‌ನ ಮುಚ್ಚಳವನ್ನು ತೆರೆದಿದ್ದು, ಗ್ಲಾಸ್‌ವೊಂದರಲ್ಲಿ ನೀರನ್ನು ಸುರಿದುಕೊಂಡ ಸುಷ್ಮಾ ಅದನ್ನು ದೇವುಬಾರಿಗೆ ನೀಡಿದರು. ಏನಾಗುತ್ತಿದೆ ಎಂದು ಉಭಯ ಕಡೆಗಳ ಅಧಿಕಾರಿಗಳಿಗೆ ತಿಳಿಯುವ ಮೊದಲೇ ಇದು ನಡೆದುಹೋಗಿತ್ತು.

ಅಂದ ಹಾಗೆ ಕೆಮ್ಮುತ್ತಲೇ ಭಾಷಣ ಮುಂದುವರಿಸಿದ್ದ ದೇವುಬಾರಿಗೆ ಸುಷ್ಮಾ ತನ್ನ ಬಳಿ ಬಂದಿದ್ದು ಗೊತ್ತಾಗಿರಲಿಲ್ಲ, ಹೀಗಾಗಿ ಸುಷ್ಮಾ ಕೈಯಲ್ಲಿ ನೀರಿನ ಗ್ಲಾಸ್ ಹಿಡಿದು ಕೊಂಡು ಕಾಯುತ್ತಿದ್ದರು. ಕೆಲ ಸಮಯದ ಬಳಿಕ ಅವರನ್ನು ಕಂಡ ದೇವುಬಾ ಅಚ್ಚರಿಗೊಂಡು ನೀರಿನ ಗ್ಲಾಸ್ ಪಡೆದುಕೊಂಡು ದೊಡ್ಡದೊಂದು ‘ಥ್ಯಾಂಕ್ಸ್’ ಹೇಳಿದರು.

ದೇವುಬಾ ನೀರು ಕುಡಿಯುತ್ತಿದ್ದಾಗ ಖಾಲಿ ಗ್ಲಾಸ್ ತೆಗೆದುಕೊಳ್ಳಲು ಸುಷ್ಮಾ ಕಾದು ನಿಂತಿದ್ದರು. ಆದರೆ ಅಧಿಕಾರಿಯೋರ್ವರು ಬಂದು ಆ ಕೆಲಸ ಮಾಡಿದಾಗ ಸುಷ್ಮಾ ಅದೇ ಮಂದಹಾಸದೊಂದಿಗೆ ತನ್ನ ಆಸನಕ್ಕೆ ಮರಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X