Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುಂದಿನ ವಿಧಾನಸಭಾ ಚುನಾವಣೆ...

ಮುಂದಿನ ವಿಧಾನಸಭಾ ಚುನಾವಣೆ ಐತಿಹಾಸಿಕವಾದದ್ದು: ಸಿ.ಎಂ.ಇಬ್ರಾಹೀಂ

ವಾರ್ತಾಭಾರತಿವಾರ್ತಾಭಾರತಿ25 Aug 2017 7:24 PM IST
share
ಮುಂದಿನ ವಿಧಾನಸಭಾ ಚುನಾವಣೆ ಐತಿಹಾಸಿಕವಾದದ್ದು: ಸಿ.ಎಂ.ಇಬ್ರಾಹೀಂ

ಬೆಂಗಳೂರು, ಆ.25: ರಾಜ್ಯ ವಿಧಾನಸಭೆಗೆ ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಯು ಐತಿಹಾಸಿಕವಾಗಲಿದೆ ಎಂದು ನೂತನ ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹೀಂ ಅಭಿಪ್ರಾಯಪಟ್ಟಿದ್ದಾರೆ.

 ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲ್ಲು ತನ್ನ ಬತ್ತಳಿಕೆಯಲ್ಲಿರುವ ಎಲ್ಲ ಅಸ್ತ್ರಗಳನ್ನು ಪ್ರಯೋಗಿಸಲಿದೆ ಎಂದರು.

ಸ್ವತಂತ್ರ ಭಾರತದ ಇತಿಹಾಸದಲ್ಲಿ ಈ ರೀತಿಯ ವಿಧಾನಸಭೆ ಚುನಾವಣೆ ಈ ಹಿಂದೆ ನಡೆದಿಲ್ಲ, ಬಹುಷಃ ಮುಂದೆ ನಡೆಯಲು ಸಾಧ್ಯವಿಲ್ಲದಂತಹ ಪರಿಸ್ಥಿತಿ ಈಗಿನಿಂದಲೆ ನಿರ್ಮಾಣವಾಗುತ್ತಿದೆ. ಇಡೀ ದೇಶದ ಕಣ್ಣುಗಳು ಈಗ ಕರ್ನಾಟಕದತ್ತ ನೆಟ್ಟಿವೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವದ ಬೆನ್ನೆಲುಬು ಮತ್ತೆ ಶಕ್ತಿಯುತವಾಗಲಿದೆ. ಬಿಹಾರ ಹಾಗೂ ಉತ್ತರಪ್ರದೇಶದಲ್ಲಿ ನಡೆದಿರುವ ವಿದ್ಯಾಮಾನಗಳು ಜಾತ್ಯತೀತ ಮನಸ್ಥಿತಿ ಹೊಂದಿರುವ ಎಲ್ಲರಲ್ಲೂ ಆತಂಕ ಮೂಡಿಸಿದೆ ಎಂದು ಇಬ್ರಾಹೀಂ ತಿಳಿಸಿದರು.

ಬಿಜೆಪಿ ತನ್ನ ಕೋಮುವಾದಿ ಕಾರ್ಯಸೂಚಿಯನ್ನು ಅನುಷ್ಠಾನಗೊಳಿಸಲು ದಲಿತರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರನ್ನು ಮುಖ್ಯ ವಾಹಿನಿಯಿಂದ ದೂರ ಮಾಡುವ ಪ್ರಯತ್ನಗಳನ್ನು ನಡೆಸುತ್ತಿದೆ. ರಾಜ್ಯದ ಮತದಾರರು ಪ್ರಬುದ್ಧರಾಗಿದ್ದು, ತಮ್ಮ ಹಾಗೂ ದೇಶದ ಭವಿಷ್ಯಕ್ಕಾಗಿ ಉತ್ತಮ ಆಯ್ಕೆಯನ್ನೆ ತಮ್ಮದಾಗಿಸಿಕೊಳ್ಳುತ್ತಾರೆ ಎಂದು ಇಬ್ರಾಹೀಂ ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪಕ್ಷಕ್ಕೆ ಆಸರೆಯಾಗಿರುವ ‘ಅಹಿಂದ’ ಮತಗಳು ಯಾವುದೆ ಕಾರಣಕ್ಕೂ ಛಿದ್ರವಾಗದಂತೆ ಸರಕಾರ ಎಚ್ಚರಿಕೆ ವಹಿಸಬೇಕು. ಬಿಜೆಪಿಯು ಆದಾಯ ತೆರಿಗೆ ಇಲಾಖೆ, ಸಿಬಿಐ ಸೇರಿದಂತೆ ಎಲ್ಲ ಅಸ್ತ್ರಗಳನ್ನು ಬಳಸಲಿದೆ. ತಮಿಳುನಾಡಿನಲ್ಲಿ ಈ ಪ್ರಯೋಗ ನಡೆಯುತ್ತಿದೆ ಎಂದು ಅವರು ಆರೋಪಿಸಿದರು.

ರಾಜ್ಯದಲ್ಲಿ ಬಿಜೆಪಿ ಛಿದ್ರವಾಗಿದೆ. ಸರಕಾರದ ವಿರುದ್ಧ ಹೇಳಲು ಅವರ ಬಳಿ ಏನು ಇಲ್ಲ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೂಚನೆ ಕೊಟ್ಟ ನಂತರ ಬೀದಿಗಿಳಿದಿದ್ದಾರೆ. ರಾಜ್ಯ ಸರಕಾರವು ಜನಸಾಮಾನ್ಯರು, ಬಡವರ ಪರವಾಗಿ ಏನೆಲ್ಲಾ ಮಾಡುತ್ತಿದೆ ಎಂಬುದು ಸ್ಥಳೀಯ ಬಿಜೆಪಿ ನಾಯಕರಿಗೂ ಗೊತ್ತಿದೆ ಎಂದು ಇಬ್ರಾಹೀಂ ಹೇಳಿದರು.

ಸತತ ಮೂರು ವರ್ಷಗಳಿಂದ ರಾಜ್ಯದಲ್ಲಿ ಬರಗಾಲವಿದೆ. ಆದರೂ, ಯಾರೊಬ್ಬರೂ ಗುಳೆ ಹೋಗಲಿಲ್ಲ. ಇದಕ್ಕೆ ಸರಕಾರದ ಅನ್ನಭಾಗ್ಯ ಯೋಜನೆ ಕಾರಣ ಎಂದು ಸಮಾಜದ ಹಲವಾರು ಗಣ್ಯರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಅವರು ಹೇಳಿದರು.

ಸಚಿವ ಸ್ಥಾನದ ಆಕಾಂಕ್ಷಿಯಲ್ಲ

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಅಧಿಕಾರಕ್ಕಾಗಿ ಯಾರ ಬಳಿಯೂ ಹೋಗಿಲ್ಲ. ಮುಖ್ಯಮಂತ್ರಿ, ಪಕ್ಷದ ಹೈಕಮಾಂಡ್ ವಿಶ್ವಾಸವಿಟ್ಟು ವಿಧಾನಪರಿಷತ್‌ಗೆ ಕಳುಹಿಸಿಕೊಟ್ಟಿದೆ. ನನಗೆ ರಾಜ್ಯಕ್ಕಿಂತ ರಾಷ್ಟ್ರರಾಜಕಾರಣದಲ್ಲಿ ಆಸಕ್ತಿ. ಈಗಿರುವ ಸೀಮಿತ ಅವಧಿಯಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ ಮುಂದಿನ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.

-ಸಿ.ಎಂ.ಇಬ್ರಾಹೀಂ, ನೂತನ ವಿಧಾನಪರಿಷತ್ ಸದಸ್ಯ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X