‘ಶೋಧ – 2017’ ಅಂತರ್ ಕಾಲೇಜ್ ಸ್ಪರ್ಧೆಯ ಸಮಾರೋಪ ಸಮಾರಂಭ

ದೇರಳಕಟ್ಟೆ,ಆ.25:ಕಣಚೂರು ಇನ್‍ಸ್ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್ ಆ್ಯಂಡ್ ಸಯನ್ಸ್ ಪದವಿ ಕಾಲೇಜಿನ ವತಿಯಿಂದ ಹಮ್ಮಿಕೊಂಡಿದ್ದ ಶೋಧ 2017 ಅಂತರ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ನಡೆದ ಸ್ಪರ್ಧೆಯ ಸಮಾರೋಪ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು, ದೇಶಭಕ್ತಿಗೀತೆ, ಕನ್ನಡ ಭಾಷಣ ಸ್ಪರ್ಧೆ, ಇಂಗ್ಲೀಷ್ ಭಾಷಣ ಸ್ಪರ್ಧೆ, ಕಸದಿಂದ ರಸ ಸ್ಪರ್ಧೆ ಹಾಗೂ ಜಾನಪದ ನೃತ್ಯ ಸ್ಪರ್ಧೆಗಳು ನಡೆದವು, ಈ ಸ್ಪರ್ಧೆಯಲ್ಲಿ ಮೋರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜ್ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ಕಣಚೂರು ಮಹಿಳಾ ಪದವಿಪೂರ್ವ ಕಾಲೇಜ್ ದ್ವಿತೀಯ ಸ್ಥಾನ ಪಡೆದುಕೊಂಡಿತು.
ಈ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ ಕಣಚೂರು ಆಸ್ಪತ್ರೆಯ ಮುಖ್ಯ ಆಡಳಿತ ಅಧಿಕಾರಿಯಾದ ರೋಹನ್ ಮೋನಿಸ್ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿಯನ್ನು ವಿತರಿಸಿದರು. ಪದವಿ ಕಾಲೇಜಿನ ಪ್ರೊ. ಇಕ್ಬಾಲ್ ಅಹಮದ್ ಯು.ಟಿ., ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ. ಹೇಮಲತಾ, ಪ್ರಿಸ್ಕೂಲ್‍ನ ಲಿನೇಟ್ ಡಿ.ಸೋಜ ಹಾಗೂ ಕಾರ್ಯಕ್ರಮದ ಸಂಯೋಜಕರಾದ ವಾಣಿಜ್ಯ ವಿಭಾಗ ವಿನಾಶ್ ಎಸ್.ಎಂ., ಶ್ರೀಮತಿ ಆ್ಯಂಜಲಿನ್ ಸುಪ್ರಿಯಾ ಲೋಬೋ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪದವಿ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಉಪನ್ಯಾಸಕರಾದ ಸತ್ಯನಾರಾಯಣ ಭಟ್ ಸ್ವಾಗತಿಸಿದರು, ವಾಣಿಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕಿಯಾದ ಕುಮಾರಿ ಜಯಶ್ರೀ ಕಾರ್ಯಕ್ರಮ ನಿರೂಪಿಸಿದರು, ತೃತೀಯ ಬಿ.ಸಿ.ಎ. ವಿದ್ಯಾರ್ಥಿನಿ ಶಾನುಝಾ ಬಾನು ವಂದಿಸಿದರು.







