Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿಡ್ಲಘಟ್ಟ : ಸಾಲ ವಿತರಣಾ ಸಮಾರಂಭ

ಶಿಡ್ಲಘಟ್ಟ : ಸಾಲ ವಿತರಣಾ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ26 Aug 2017 4:31 PM IST
share
ಶಿಡ್ಲಘಟ್ಟ : ಸಾಲ ವಿತರಣಾ ಸಮಾರಂಭ

ಶಿಡ್ಲಘಟ್ಟ,ಆ.26 :  ಡಿ.ಸಿ.ಸಿ.ಬ್ಯಾಂಕಿನಲ್ಲಿ ಪಡೆದುಕೊಳ್ಳುವ ಸಾಲ ಸೌಲಭ್ಯಗಳನ್ನು ರೈತರು ನಿಗದಿತ ಸಮಯದಲ್ಲಿ ಮರು ಪಾವತಿ ಮಾಡುವ ಮೂಲಕ ಸಹಕಾರಿ ಬ್ಯಾಂಕುಗಳ ಉಳಿವು, ಅಭಿವೃದ್ಧಿಗೆ  ಹೆಚ್ಚಿನ ಸಹಕಾರ ನೀಡಬೇಕು ಎಂದು ಡಿ.ಸಿ.ಸಿ.ಬ್ಯಾಂಕ್ ಜಿಲ್ಲಾ ಅಧ್ಯಕ್ಷ ಬ್ಯಾಲಹಳ್ಳಿ ಗೊವಿಂದೇಗೌಡ ಹೇಳಿದರು.

ನಗರದ ವೇಣುಗೋಪಾಲಸ್ವಾಮಿ ದೇವಾಲಯದ ಆವರಣದಲ್ಲಿ ಶಿಡ್ಲಘಟ್ಟ ಶಾಖೆ, ಮಳ್ಳೂರು ರೇಷ್ಮೆ ಬೆಳೆಗಾರರ ಹಾಗೂ ರೈತ ಸೇವಾ ಸಹಕಾರ ಸಂಘದಿಂದ ಕೆ.ಸಿ.ಸಿ. ಸಾಲ ಮತ್ತು ಮಹಿಳಾ ಸಂಘಗಳಿಗೆ ಸಾಲ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಡಿ.ಸಿ.ಸಿ.ಬ್ಯಾಂಕ್ ಕೇವಲ ಮಹಿಳೆಯರಿಗಷ್ಟೆ ಅಲ್ಲದೆ ರೈತರ ಕೃಷಿ ಉದ್ದೇಶಗಳಿಗೂ ಸಾಲ ನೀಡುತ್ತಿದೆ. ಪಡೆದುಕೊಂಡ ಸಾಲವನ್ನು ನಿಗದಿತ ಸಮಯದಲ್ಲಿ ಮರು ಫಾವತಿ ಮಾಡುವ ಕಡೆಗೆ ರೈತರಿಗೆ ಬದ್ದತೆ ಬೇಕು. ಜಿಲ್ಲಾ ಸಹಕಾರಿ ಬ್ಯಾಂಕಿನಿಂದ ರೈತರಿಗೆ 2.3 ಕೋಟಿ ಮಹಿಳಾ ಸಂಘಗಳಿಗೆ 70 ಲಕ್ಷ ಸಾಲ ವಿತರಣೆ ಮಾಡಲಾಗುತ್ತಿದೆ. ರೈತರು ಹಾಗೂ ಮಹಿಳಾ ಸಂಘಗಳ ಪದಾಧಿಕಾರಿಗಳು ರಾಷ್ಟ್ರೀಕೃತ ಬ್ಯಾಂಕುಗಳ ಮೂಲಕ ವ್ಯವಹರಿಸುವುದರ ಬದಲಿಗೆ ಸಹಕಾರಿ ಬ್ಯಾಂಕುಗಳಲ್ಲೆ ಖಾತೆ ತೆರೆದು ವ್ಯವಹರಿಸಬೇಕು. ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಹಿಳಾ ಸಂಘಗಳು ಉತ್ತಮವಾಗಿ ಮರುಪಾವತಿ ಮಾಡುವ ಮೂಲಕ ಸಹಕಾರಿ ಸಂಘಗಳ ಅಭಿವೃದ್ಧಿಗೆ ಸಹಕರಿಸಿದ್ದಾರೆ. ಸರ್ಕಾರ ಹಣಕೊಡಲ್ಲ, ಸ್ವಂತ ಹಣದಲ್ಲಿ ಸಾಲ ವಿತರಣೆ ಮಾಡಲಾಗುತ್ತಿದೆ. ವಾರದ ಸಭೆಗಳನ್ನು ಮಾಡುವ ಮೂಲಕ ಸಂಘಟಿತರಾಗಬೇಕು ಎಂದರು.

 ಜಿಲ್ಲಾ ಡಿ.ಸಿ.ಸಿ. ಬ್ಯಾಂಕ್ ಉಪಾಧ್ಯಕ್ಷ ಎಚ್.ವಿ.ನಾಗರಾಜ್ ಮಾತನಾಡಿ, ಸಹಕಾರಿ ಬ್ಯಾಂಕುಗಳಿಂದ ಪಡೆದುಕೊಂಡ ಸಾಲವನ್ನು ನಿಗದಿತ ಸಮಯದಲ್ಲಿ ಮರುಫಾವತಿ ಮಾಡಿದರೆ, ಬಡ್ಡಿಯಿಲ್ಲದೆ ಸಾಲವಾಗಲಿದೆ, ಅವಧಿ ಮೀರಿದರೆ ಬಡ್ಡಿ ಸಮೇತ ಫಾವತಿ ಮಾಡಬೇಕಾಗುತ್ತದೆ.  ಉದ್ದೇಶಿತ ಯೋಜನೆಗೆ ಸಾಲ ಉಪಯೋಗವಾಗಬೇಕು. ಮಹಿಳೆಯರು ಹಾಗೂ ರೈತರು ಸಾಲ ಪಡೆದುಕೊಂಡು ಅದರಿಂದ ಆರ್ಥಿಕ ಅಭಿವೃದ್ಧಿ ಹೊಂದುವ ಕಡೆಗೆ ಗಮನಹರಿಸಬೇಕು.  ಡಿ.ಸಿ.ಸಿ.ಬ್ಯಾಂಕಿನಿಂದ 450. ಕೋಟಿ, ಕೆ.ಸಿ.ಸಿ ಸಾಲ 350 ಕೋಟಿ ಮಹಿಳಾ ಸಂಘಗಳಿಗೆ ಸಾಲ ವಿತರಣೆ ಮಾಡಿದೆ.  ಜನರು ರಾಷ್ಟ್ರೀಕೃತ ಬ್ಯಾಂಕುಗಳ ಕಡೆಗೆ ಹೆಚ್ಚು ಉತ್ಸಾಹ ತೋರುತ್ತಿದ್ದಾರೆ. ಡಿ.ಸಿ.ಸಿ.ಬ್ಯಾಂಕಿನಲ್ಲಿ ವ್ಯವಹರಿಸಬೇಕು ಎಂದರು.

ರೈತರಿಗೆ ಕೆ.ಸಿ.ಸಿ.ಸಾಲ, ಮಹಿಳಾ ಸಂಘಗಳಿಗೆ ಸಾಲದ ಚೆಕ್ಕುಗಳನ್ನು ವಿತರಣೆ ಮಾಡಲಾಯಿತು.

ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಪಿ. ಶಿವಾರೆಡ್ಡಿ, ಹನುಮೇಗೌಡ, ಶ್ರೀರಾಮರೆಡ್ಡಿ, ಮಳ್ಳೂರು ಸಹಕಾರಿ ಬ್ಯಾಂಕಿನ ಅಧ್ಯಕ್ಷ ಬಿ.ಎಂ.ವೆಂಕಟರೆಡ್ಡಿ, ಉಪಾಧ್ಯಕ್ಷ ಸಿ.ನಾರಾಯಣಸ್ವಾಮಿ, ನಿರ್ದೇಶಕರಾದ ಎಂ.ಆರ್.ಮುನಿಕೃಷ್ಣಪ್ಪ, ಮುನಿರಾಜು, ವಿ.ಶಾಂತಮ್ಮ, ಕೆ.ಪದ್ಮ, ಸಂಜೀವಮ್ಮ, ಎಚ್.ವಿ.ರಾಮಕೃಷ್ಣಪ್ಪ, ಕೃಷ್ಣಪ್ಪ, ವ್ಯವಸ್ಥಾಪಕ ಜಗನ್ನಾಥ್ ಮುಂತಾದವರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X