Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ವೈದ್ಯಕೀಯ ಕೋರ್ಸು’ ಆಫ್‌ಲೈನ್ ಸೀಟು...

‘ವೈದ್ಯಕೀಯ ಕೋರ್ಸು’ ಆಫ್‌ಲೈನ್ ಸೀಟು ಹಂಚಿಕೆ

ವಾರ್ತಾಭಾರತಿವಾರ್ತಾಭಾರತಿ26 Aug 2017 5:34 PM IST
share

ಬೆಂಗಳೂರು, ಆ. 26: ಸರಕಾರದ ನಿರ್ದೇಶನದಂತೆ ಎರಡನೆ ಸುತ್ತಿನ ಸೀಟು ಹಂಚಿಕೆಯ ನಂತರ ಉಳಿದಿರುವ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕೆ ಆಫ್‌ಲೈನ್ ಸೀಟು ಹಂಚಿಕೆ (MOP-UP ROUND) http://kea.kar.nic.in ಯನ್ನು ಆ.26, 27 ಹಾಗೂ 28ರಂದು ನಡೆಸಲಾಗುವುದು. ವಿವರವಾದ ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನಲ್ಲಿ ಪ್ರಕಟಿಸಲಾಗಿದೆ.

ಎರಡನೆ ಸುತ್ತಿನ ಸೀಟು ಹಂಚಿಕೆಯ ನಂತರ ವಿವಿಧ ಪ್ರವರ್ಗಗಳಲ್ಲಿ ಉಳಿದಿರುವ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸೀಟುಗಳ ವಿವರಗಳನ್ನು ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನಲ್ಲಿ ಪ್ರಕಟಿಸಲಾಗಿದೆ.

ಆಫ್‌ಲೈನ್ ಸೀಟು ಹಂಚಿಕೆ (MOP-UP ROUND) ಪ್ರಕ್ರಿಯೆಯಲ್ಲಿ ಭಾಗವಹಿಸುವ ಮೊದಲು ಸೀಟುಗಳ ಲಭ್ಯತೆಯನ್ನು ನೋಡಿ ಭಾಗವಹಿಸಬಹುದು. ಎರಡನೆ ಸುತ್ತಿನ ಸೀಟು ಹಂಚಿಕೆಯ ನಂತರ ಯಾವುದಾದರೂ ಸೀಟುಗಳು ರದ್ದುಗೊಂಡರೆ ಅಂತಹ ರದ್ದುಗೊಳ್ಳುವ ಸೀಟುಗಳನ್ನು ಆಯಾ ಪ್ರವರ್ಗದಲ್ಲಿಯೆ ಹಂಚಿಕೆಗೆ ಪರಿಗಣಿಸಲಾಗುವುದು.

ನೀಟ್-2017ಕ್ಕೆ ಹಾಜರಾಗಿ ಅರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಮತ್ತು ಇಲ್ಲಿಯವರೆಗೆ ಅಖಿಲ ಭಾರತ ಮಟ್ಟದಲ್ಲಿ, ಡಿಜಿಎಚ್‌ಎಸ್ ಅಥವಾ ಯಾವುದೇ ಸಂಸ್ಥೆ, ಬೋರ್ಡುಗಳಿಂದ ಯಾವುದೇ ಸೀಟುಗಳಿಗೆ ಪ್ರವೇಶ ಪಡೆದಿದ್ದಲ್ಲಿ ಈ ಸುತ್ತಿನಲ್ಲಿ ಭಾಗವಹಿಸಲು ಅರ್ಹರಾಗುವುದಿಲ್ಲ.

ಕೆಇಎ ಮುಖಾಂತರ ದಂತ ವೈದ್ಯಕೀಯ ಸೀಟು ಹಂಚಿಕೆಯಾದವರು ವೈದ್ಯಕೀಯ ಸೀಟು ಹಂಚಿಕೆಗಾಗಿ ಮಾತ್ರ ಭಾಗವಹಿಸಬಹುದು. ಆದರೆ, ಈ ಸುತ್ತಿನಲ್ಲಿ ದಂತ ವೈದ್ಯಕೀಯ ಸೀಟುಗಳನ್ನು ಆಯ್ಕೆ ಮಾಡಿಕೊಳ್ಳಲು ಅರ್ಹರಾಗುವುದಿಲ್ಲ. ಮುಂದುವರಿದು ವೈದ್ಯಕೀಯ ಸೀಟನ್ನು ಹಂಚಿಕೆ ಪಡೆದವರು ಈ ಸುತ್ತಿನಲ್ಲಿ ಭಾಗವಹಿಸಲು ಅರ್ಹರಾಗುವುದಿಲ್ಲ.

ಎರಡನೆ ಸುತ್ತಿನ ಸೀಟು ಹಂಚಿಕೆಯ ನಂತರ ವಿವಿಧ ಪ್ರವರ್ಗಗಳಲ್ಲಿ ಉಳಿದಿರುವ ಸೀಟುಗಳ ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಕಾಲೇಜುವಾರು ವಿವರಗಳನ್ನು ವೆಬ್‌ಸೈಟ್ http://kea.kar.nic.in ನಲ್ಲಿ ಪ್ರಕಟಿಸಲಾಗಿದೆ.

ಪ್ರವರ್ಗಗಳು: ಅಲ್ಪಸಂಖ್ಯಾತ(ತಮಿಳು)-ವೈದ್ಯಕೀಯ 64, ದಂತ ವೈದ್ಯಕೀಯ 35, ಅಲ್ಪಸಂಖ್ಯಾತ(ತೆಲುಗು)-ವೈದ್ಯಕೀಯ 75, ದಂತ ವೈದ್ಯಕೀಯ 131, ಅಲ್ಪಸಂಖ್ಯಾತ(ತೆಲುಗು-ಎಚ್‌ಕೆ)-ವೈದ್ಯಕೀಯ 47, ದಂತ ವೈದ್ಯಕೀಯ 36, ಅಲ್ಪಸಂಖ್ಯಾತ(ಕೊಡವ)-ವೈದ್ಯಕೀಯ 46, ದಂತ ವೈದ್ಯಕೀಯ 14, ಅಲ್ಪಸಂಖ್ಯಾತ(ಮುಸ್ಲಿಮ್-ಎಚ್‌ಕೆ)-ದಂತ ವೈದ್ಯಕೀಯ 30, ಅಲ್ಪಸಂಖ್ಯಾತ(ತುಳು)-ವೈದ್ಯಕೀಯ 11, ದಂತ ವೈದ್ಯಕೀಯ 98, ಅನಿವಾಸಿ ಭಾರತೀಯ-ವೈದ್ಯಕೀಯ 514, ದಂತ ವೈದ್ಯಕೀಯ 339 ಸೀಟುಗಳಿವೆ.

ಆ.25ರವರೆಗೆ ಮತ್ತೆ ಯಾವುದೇ ಸೀಟು ರದ್ದಾದರೆ ಸೀಟುಗಳ ವಿವರಗಳನ್ನು ವೆಬ್‌ಸೈಟ್ http://kea.kar.nic.in  ನಲ್ಲಿ ಪ್ರಕಟಿಸಲಾಗುವುದು. ರದ್ದಾದ ಸೀಟುಗಳು ಯಾವ ವರ್ಗಕ್ಕೆ ಸೇರಿರುತ್ತದೆಯೊ ಅದೇ ವರ್ಗಕ್ಕೆ ನೀಡಿ ನಂತರ ಮಾಡಲಾಗುವುದು ಎಂದು ರಾಜ್ಯ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X