Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗುತ್ತಿನ ಚಾವಡಿಯಲ್ಲಿ ನ್ಯಾಯ ತೀರ್ಮಾನ...

ಗುತ್ತಿನ ಚಾವಡಿಯಲ್ಲಿ ನ್ಯಾಯ ತೀರ್ಮಾನ ನಡೆಸುವ ಪದ್ಧತಿ ಜಾರಿಯಲ್ಲಿತ್ತು: ಅಬ್ದುಲ್ ರಶೀದ್

ವಾರ್ತಾಭಾರತಿವಾರ್ತಾಭಾರತಿ26 Aug 2017 6:03 PM IST
share
ಗುತ್ತಿನ ಚಾವಡಿಯಲ್ಲಿ ನ್ಯಾಯ ತೀರ್ಮಾನ ನಡೆಸುವ ಪದ್ಧತಿ ಜಾರಿಯಲ್ಲಿತ್ತು: ಅಬ್ದುಲ್ ರಶೀದ್

ಮಂಗಳೂರು, ಆ. 26 : ಪ್ರಾಚೀನ ತುಳುನಾಡಿನಲ್ಲಿ ಪ್ರತಿಷ್ಠಿತ ಬಂಟ ಮನೆತನದ ಗುತ್ತಿನ ಚಾವಡಿಯಲ್ಲಿ ನ್ಯಾಯ ತೀರ್ಮಾನ ನಡೆಸುವ ಪದ್ಧತಿ ಜಾರಿಯಲ್ಲಿತ್ತು. ಗುತ್ತಿನ ಯಜಮಾನ ತೆಗೆದುಕೊಂಡ ನಿಷ್ಪಕ್ಷಪಾತದ ತೀರ್ಮಾನ ಸರ್ವರ ಮೆಚ್ಚುಗೆಗೆ ಪಾತ್ರವಾಗುತ್ತಿತ್ತು. ದ.ಕ. ಜಿಲ್ಲೆಯಲ್ಲಿ ಧರ್ಮಧರ್ಮದ ನಡುವೆ ಇತ್ತೀಚೆಗೆ ಹದಗೆಡುತ್ತಿರುವ ಸೌಹಾರ್ಧಯುತ ಸಂಬಂಧ ಮತ್ತೆ ಮರುಸ್ಥಾಪಿಸಲು ಈ ಹಿಂದಿನ ವ್ಯವಸ್ಥೆಯೇ ಜಾರಿಗೆ ಬರುವ ಅನಿವಾರ್ಯತೆ ಇದೆ ಎಂದು ಉಳ್ಳಾಲ ಸಯ್ಯದ್ ಮದನಿ ದರ್ಗಾ ಸಮಿತಿ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್ ಹೇಳಿದರು.

ಹಾಜಿ ರಶೀದ್ ಅವರು ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಮಂಗಳೂರಿನ ಬಂಟ್ಸ್ ಹಾಸ್ಟೆಲ್‌ನ ಓಂಕಾರನಗರದಲ್ಲಿ ನಡೆಯುತ್ತಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ಧಾರ್ಮಿಕ ಸಭೆಯ ಮುಖ್ಯ ಅತಿಥಿಯಾಗಿದ್ದು ಮಾತನಾಡಿದರು.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇದರ ಕಾರ್ಯಾಧ್ಯಕ್ಷ ರಾಜ್ ಕಿರಣ್ ಜಿ.ರೈ ಮಾತನಾಡಿ, ಪ್ರಪಂಚದಾದ್ಯಂತ ಶ್ರೀ ಗಣೇಶನನ್ನು ಆರಾಧಿಸಲಾಗುತ್ತಿದ್ದು, ಗಣೇಶೋತ್ಸವದ ಕಾರ್ಯಕ್ರಮದಲ್ಲಿ ಸರ್ವ ಧರ್ಮೀಯರನ್ನು ಒಗ್ಗೂಡಿಸುವ ಮೂಲಕ ಶ್ರೀ ಗಣೇಶ ಸರ್ವರೂ ಸೇರಿ ಆರಾಧಿಸುವ ದೇವರಾಗಿದ್ದಾರೆ ಎಂದು ಹೇಳಿದರು.

ಕೂಳೂರು ಚರ್ಚ್‌ನ ಧರ್ಮಗುರು ರೆ ಫಾ ವಿನ್ಸೆಂಟ್ ಡಿ'ಸೋಜ ಶುಭಹಾರೈಸಿ, ಸಾರ್ವಜನಿಕ ಗಣೇಶೋತ್ಸವದಿಂದ ಈಶಸೇನೆ, ದೇಶಸೇನೆ ಹಾಗೂ ಕಲಾಸೇನೆ ಎಂಬ ನಾಲ್ಕು ಬಗೆಯ ಸೇನಾ ಕಾರ್ಯಗಳು ನಡೆಯುತ್ತಿರುವುದು ಪ್ರಶಂಸನೀಯ ಎಂದರು.

ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಂಜುನಾಥ ಭಂಡಾರಿ, ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ. ಮಂಜಯ್ಯ ಶೆಟ್ಟಿ ಬಂಟರ ಮಾತೃ ಸಂಘದ ಪದಾಧಿಕಾರಿಗಳಾದ ವಸಂತ ಶೆಟ್ಟಿ, ರವೀಂದ್ರನಾಥ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರಾಜ್ ಕಿರಣ್ ಜಿ.ರೈ, ಮಾಡವೀ ಮೋಟರ್ಸ್‌ನ ಆಡಳಿತ ನಿರ್ದೇಶಕ ಆರೂರು ಸಂಜಯರಾವ್, ಮನೋಹರ ಶೆಟ್ಟಿ, ಡಾ ಮಹಮ್ಮದ್ ಇಕ್ಬಾಲ್, ಪತ್ರಕರ್ತ ರೊನಾಲ್ಡ್ ಫೆರ್ನಾಂಡೀಸ್, ಡಾ ಸದಾನಂದ ಪೆರ್ಲ, ಜೀವನ್‌ರಾಮ್ ಸುಳ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನದ ಮೆನೇಜಿಂಗ್ ಟ್ರಸ್ಟಿ ಅಜಿತ್ ಕುಮಾರ್ ರೈ ಮಾಲಾಡಿ ಸ್ವಾಗತಿಸಿದರು. ಮಂಜುಳ ಶೆಟ್ಟಿ ಮತ್ತು ಪ್ರಕಾಶ್ ಮೇಲಾಂಟ ಕಾರ್ಯಕ್ರಮ ನಿರ್ವಹಿಸಿದರು. ಪ್ರಧಾನ ಕಾರ್ಯದರ್ಶಿ ದಿವಾಕರ ಸಾಮಾನಿ ವಂದಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X