ಉ.ಪ್ರದೇಶ: ಆಸ್ಪತ್ರೆಯ ಸಿಬ್ಬಂದಿಯಿಂದ ಮಹಿಳೆಯ ಅತ್ಯಾಚಾರ
.jpg)
ಲಕ್ನೊ, ಆ.26: ಚಿಕಿತ್ಸೆಗೆ ದಾಖಲಾದ ಮಹಿಳೆಯನ್ನು ಆಸ್ಪತ್ರೆಯ ಸಿಬ್ಬಂದಿ ಅತ್ಯಾಚಾರ ಮಾಡಿರುವ ಘಟನೆ ಉ.ಪ್ರದೇಶದ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.
30ರ ಹರೆಯದ ಮಹಿಳೆಯನ್ನು ಆಸ್ಪತ್ರೆಯ ಪ್ರತ್ಯೇಕ ವಾರ್ಡ್‌ನಲ್ಲಿ ದಾಖಲಿಸಲಾಗಿತ್ತು. ಶುಕ್ರವಾರ ರಾತ್ರಿ ಪುರುಷ ನರ್ಸ್ ಪುಷ್ಕರ್ ಕುಮಾರ್ ಎಂಬಾತ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ. ಮರುದಿನ ಬೆಳಿಗ್ಗೆ ಮಹಿಳೆ ನೀಡಿದ ದೂರಿನಂತೆ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧೀಕ್ಷಕ ಉಮೇಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಮಹಿಳೆ ಜಾರ್ಖಂಡ್ ಮೂಲದವಳಾಗಿದ್ದು ಪುಷ್ಕರ್ ಕುಮಾರ್‌ನನ್ನು ಹೊರಗುತ್ತಿಗೆ ಆಧಾರದಲ್ಲಿ ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
Next Story





