ಕಳಪೆ ಕಾಮಗಾರಿ ನಡೆಸಿದರೆ ಶಿಸ್ತು ಕ್ರಮ: ಶಾಸಕ ಬೈರತಿ ಬಸವರಾಜು
ಬೆಂಗಳೂರು, ಆ.26: ನಿಗದಿತ ವೇಳೆಯಲ್ಲಿ ಗುಣಮಟ್ಟದ ಕಾಮಗಾರಿ ಮುಗಿಸದಿದ್ದರೆ ಸಂಬಂಧಿಸಿದ ಅಧಿಕಾರಿ ಹಾಗೂ ಗುತ್ತಿಗೆದಾರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಬೈರತಿ ಬಸವರಾಜು ಎಚ್ಚರಿಕೆ ನೀಡಿದ್ದಾರೆ.
ನಗರದ ಹೊರಮಾವು ರೈಲ್ವೆ ಅಂಡರ್‌ಪಾಸ್ ಸರ್ವೀಸ್ ರಸ್ತೆಗಳ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹೊರಮಾವು ರೈಲ್ವೆ ಅಂಡರ್‌ಪಾಸ್ ನಿರ್ಮಿಸಲು ನಿಗಧಿತ ಸಮಯಕ್ಕಿಂತಲು ಹೆಚ್ಚು ಸಮಯ ತೆಗೆದುಕೊಳ್ಳಲಾಗಿದೆ. ಇದರಿಂದ ವಿನಾಕಾರಣ ಸಾರ್ವಜನಿಕರಿಗೆ ಸಮಸ್ಯೆಯಾಗಲಿದೆ ಎಂದು ತಿಳಿಸಿದರು.
ರೈಲ್ವೆ ಅಂಡರ್‌ಪಾಸ್ ನಿರ್ಮಿಸಲು ಎರಡು ಹಂತದಲ್ಲಿ ಹಣ ಬಿಡುಗಡೆ ಮಾಡಲಾಗಿದೆ. ಮೊದಲನೇ ಹಂತದಲ್ಲಿ 9 ಕೋಟಿ ರೂ.ವೆಚ್ಚದಲ್ಲಿ ರೈಲ್ವೆ ಹಳಿ ಕೆಳಗಡೆ ಬಾಕ್ಸ್ ನಿರ್ಮಿಸುವುದು ಸೇರಿದಂತೆ ಹಲವು ಕಾಮಗಾರಿ ಮುಗಿದಿದೆ. ಈಗ 14.65 ಕೋಟಿ ರೂ.ವೆಚ್ಚದಲ್ಲಿ ಸರ್ವೀಸ್ ರಸ್ತೆಗಳನ್ನು ಎರಡನೇ ಹಂತವಾಗಿ ನಿರ್ಮಾಣ ಮಾಡಲಾಗುತ್ತಿದೆ ಎಂದರು.
Next Story





