ಸೆ. 6: ಬಿಸಿಸಿಐ ವತಿಯಿಂದ ಜಿಎಸ್‌ಟಿ ಜಾಗೃತಿ ಕಾರ್ಯಕ್ರಮ
ಮಂಗಳೂರು, ಆ. 26: ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ (ಬಿಸಿಸಿಐ) ವತಿಯಿಂದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಬಗ್ಗೆ ಜಾಗೃತಿ ಕಾರ್ಯಾಕ್ರಮವನ್ನು ನಗರದ ಬಲ್ಮಠ ಸಹೋದಯ ಸಭಾಂಗಣದಲ್ಲಿ ಸೆ. 6ರಂದು ಸಂಜೆ 3ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಬಿಸಿಸಿಐ ಅಧ್ಯಕ್ಷ ಎಸ್.ಎಂ.ರಶೀದ್ ಹಾಜಿಯವರ ಅಧ್ಯಕ್ಷತೆ ಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ಆಯುಕ್ತರಾದ ಎಚ್.ಜಿ.ಪವಿತ್ರ, ಹೇಮಾವತಿ ನಾಯಕ್, ಉಪ ಆಯುಕ್ತರಾದ ಶಂಭು ಭಟ್, ವಾಣಿಜ್ಯ ತೆರಿಗೆ ಅಧಿಕಾರಿ (ಲೆಕ್ಕಪತ್ರ ವಿಭಾಗ) ಜಾಗೃತಿ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





