ಮಡಿಕೇರಿ: ದಿವ್ಯಾಸ್ ಅತ್ಯುತ್ತಮ ವಿದ್ಯಾರ್ಥಿ ಪ್ರಶಸ್ತಿ ಸಭೆ

ಮಡಿಕೇರಿ, ಆ.26 : ವಿದ್ಯಾರ್ಥಿಗಳಲ್ಲಿ ಸಹಪಠ್ಯ ಚಟುವಟಿಕಾ ಕೌಶಲ್ಯವನ್ನು ವೃದ್ಧಿಸಲು ನೀಡಲಾಗುವ ದಿವ್ಯಾಸ್ ಅತ್ಯುತ್ತಮ ವಿದ್ಯಾರ್ಥಿ ಪ್ರಶಸ್ತಿ- 2017ನೆ ಸಾಲಿನ ಸಭಾ ಕಾರ್ಯಕ್ರಮ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ನಡೆಯಿತು.
ಮಂಗಳೂರು ವಿಶ್ವವಿದ್ಯಾನಿಲಯದ ಸಹಪಠ್ಯ ಚಟುವಟಿಕೆ ವಿಭಾಗ ಹಾಗೂ ದಿವ್ಯಾಸ್ ಯುವ ಸೇವಾ ಸಮಿತಿಯ ಸಹಯೋಗದಲ್ಲಿ ನಡೆದ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಡಾ. ಪಾರ್ವತಿ ಅಪ್ಪಯ್ಯ ಅವರು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಾಜಶಾಸ್ತ್ರ ವಿಭಾಗದ ಉಪನ್ಯಾಸಕಿ ಡಾ. ಎ.ಎನ್. ಗಾಯತ್ರಿ ವಹಿಸಿದ್ದರು. ಆಂಗ್ಲ ವಿಭಾಗದ ಉಪನ್ಯಾಸಕ ಶ್ರೀನಿವಾಸ್, ದಿವ್ಯಾಸ್ ಮಂಗಳೂರು ಸದಸ್ಯರುಗಳಾದ ಶೋಭಾ ಭಾಸ್ಕರನ್, ಹಾಗೂ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ವಿರಾಜಪೇಟೆಯ ಸಂತ ಅನ್ನಮ್ಮ ಕಾಲೇಜು, ಪೊನ್ನಂಪೇಟೆಯ ಅರಣ್ಯ ಮಹಾ ವಿದ್ಯಾಲಯ, ಸುಳ್ಯದ ನೆಹರು ಮೆಮೋರಿಯಲ್ ಕಾಲೇಜು ಹಾಗೂ ಕುಶಾಲನಗರದ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.





