31ರಂದು ಕೆಂಪೇಗೌಡ ಜಯಂತಿ
ಮಂಗಳೂರು, ಆ. 27: ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದ.ಕ. ಜಿಲ್ಲೆ ಇವರ ಆಶ್ರಯದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿಯು ಆ.31ರಂದು ಬೆಳಗ್ಗೆ 11 ಗಂಟೆಗೆ ನಗರದ ಸರಕಾರಿ ಶಿಕ್ಷಕ ಮಹಾವಿದ್ಯಾಲಯ,ದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಉದ್ಘಾಟಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





