ಪತ್ರಕರ್ತ ಡಿ.ಉಮಾಪತಿಗೆ ಕಿಟ್ಟಪ್ಪಗೌಡ ರುಕ್ಮಿಣಿ ದತ್ತಿ ಪ್ರಶಸ್ತಿ ಪ್ರದಾನ
.png)
ಹೊಸದಿಲ್ಲಿ, ಆ. 27: ಹಿರಿಯ ಪತ್ರಕರ್ತ ಡಿ.ಉಮಾಪತಿ ಅವರಿಗೆ ಪತ್ರಿಕಾ ರಂಗದಲ್ಲಿ ಸಲ್ಲಿಸಿರುವ ಅನುಪಮ ಸೇವೆಯನ್ನು ಪರಿಗಣಿಸಿ, ಕನ್ನಡ ಸಾಹಿತ್ಯ ಪರಿಷತ್ 2017ನೆ ಸಾಲಿನ ನಾಗಡಿಕೆರೆ ಕಿಟ್ಟಪ್ಪಗೌಡ ರುಕ್ಮಿಣಿ ದತ್ತಿ ಪ್ರಶಸ್ತಿಯನ್ನು ಇಂದು ಪ್ರದಾನ ಮಾಡಲಾಯಿತು.
ರವಿವಾರ ಹೊಸದಿಲ್ಲಿ ಕರ್ನಾಟಕ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಡಿ.ಉಮಾಪತಿ ಅವರಿಗೆ, ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಡಾ.ಮನು ಬಳಿಗಾರ, ಸಾಹಿತಿ ಹಾಗೂ ಜೆಎನ್‌ಯು ಕನ್ನಡ ಅಧ್ಯಯನ ಪೀಠದ ಮುಖ್ಯಸ್ಥ ಡಾ. ಪುರುಷೋತ್ತಮ ಬಿಳಿಮಲೆ ಪ್ರಶಸ್ತಿ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ಲೇಖಕ ಡಾ.ಸಂತೋಷ ಹಾನಗಲ್ ಸೇರಿ ಇನ್ನಿತರರು ಹಾಜರಿದ್ದರು.
Next Story





