Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾಗರ: ಸಿಂಗಾಪುರ ಪ್ರವಾಸ ಕೈಗೊಳ್ಳಲಿರುವ...

ಸಾಗರ: ಸಿಂಗಾಪುರ ಪ್ರವಾಸ ಕೈಗೊಳ್ಳಲಿರುವ ಪೌರ ಕಾರ್ಮಿಕರ ಬೀಳ್ಕೊಡುಗೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ27 Aug 2017 8:35 PM IST
share
ಸಾಗರ: ಸಿಂಗಾಪುರ ಪ್ರವಾಸ ಕೈಗೊಳ್ಳಲಿರುವ ಪೌರ ಕಾರ್ಮಿಕರ ಬೀಳ್ಕೊಡುಗೆ ಕಾರ್ಯಕ್ರಮ

ಸಾಗರ, ಆ.27: ನಗರ ನಿರ್ವಹಣೆಯಲ್ಲಿ ಸಿಂಗಾಪುರ ಅತ್ಯಂತ ಅನುಕರಣೀಯವಾಗಿದೆ. ಇದನ್ನು ನಮ್ಮ ರಾಜ್ಯದ ಪೌರ ಕಾರ್ಮಿಕರು ವೀಕ್ಷಿಸಿ, ತಾವು ಕರ್ತವ್ಯ ನಿರ್ವಹಿಸುವ ನಗರಗಳಲ್ಲಿ ಅಳವಡಿಸಿಕೊಳ್ಳಲಿ ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ ಪೌರ ಕಾರ್ಮಿಕರಿಗೆ ಸಿಂಗಾಪುರ ಅಧ್ಯಯನ ಪ್ರವಾಸಕ್ಕೆ ಕಳಿಸುತ್ತಿದೆ ಎಂದು ಉಪವಿಭಾಗಾಧಿಕಾರಿ ಹಾಗೂ ನಗರಸಭೆ ಆಡಳಿತಾಧಿಕಾರಿ ನಾಗರಾಜ್ ಆರ್. ಸಿಂಗ್ರೇರ್ ತಿಳಿಸಿದರು.

ಇಲ್ಲಿನ ನಗರಸಭೆ ಆವರಣದಲ್ಲಿ ಶನಿವಾರ ಪೌರ ಕಾರ್ಮಿಕರ ಸಂಘದ ವತಿಯಿಂದ ಸಿಂಗಾಪುರ ಪ್ರವಾಸ ಕೈಗೊಳ್ಳಲಿರುವ ಪೌರ ಕಾರ್ಮಿಕರ ಬೀಳ್ಕೊಡುಗೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಿಂಗಾಪುರ ಅತ್ಯಂತ ಸ್ವಚ್ಛ ನಗರ ಎಂಬ ಹೆಗ್ಗಳಿಕೆ ಹೊಂದಿದೆ. ಅಲ್ಲಿ ಕಸ ಸಂಗ್ರಹಣೆ, ವಿಂಗಡಣೆ, ಸಂಸ್ಕರಣೆ ಮತ್ತು ನಿರ್ವಹಣೆ ಬಗ್ಗೆ ವಿಶೇಷ ತಂತ್ರಜ್ಞಾನವನ್ನು ಅಳವಡಿಸಲಾಗಿದೆ. ಕಸವನ್ನು ರಸವನ್ನಾಗಿಸುವ ಕಲೆ ಅಲ್ಲಿ ಸಾಕಾರಗೊಂಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಪೌರ ಕಾರ್ಮಿಕರಿಗೆ ಅಲ್ಲಿನ ಕಸ ನಿರ್ವಹಣೆ ಕುರಿತು ಅಧ್ಯಯನ ಪ್ರವಾಸ ಏರ್ಪಡಿಸಿದೆ. ಅಲ್ಲಿ ನೀವು ಕಲಿತಿದ್ದನ್ನು ಸ್ಥಳೀಯವಾಗಿ ಅಳವಡಿಸಿಕೊಳ್ಳುವ ಜೊತೆಗೆ ಅದನ್ನು ನಿಮ್ಮ ಸಹವರ್ತಿಗಳಿಗೂ ಕಲಿಸುವಂತೆ ಆಗಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಎಚ್.ಕೆ.ನಾಗಪ್ಪ, ಇಷ್ಟು ವರ್ಷಗಳ ಕಾಲ ಪೌರಾಡಳಿತ ಇಲಾಖೆಯಲ್ಲಿ ಕೆಲಸ ಮಾಡುವ ಹಿರಿಯ ಅಧಿಕಾರಿಗಳು, ಸಿಬ್ಬಂದಿಗಳು ವಿದೇಶಗಳಿಗೆ ಅಧ್ಯಯನ ಪ್ರವಾಸ ಕೈಗೊಳ್ಳುತ್ತಿದ್ದರು. ಮೊದಲ ಬಾರಿಗೆ ಸಚಿವರಾದ ಆಂಜನೇಯ ಅವರು ಪೌರಾಡಳಿತ ಇಲಾಖೆಯ ಜೀವಾಳವಾಗಿರುವ ಪೌರ ಕಾರ್ಮಿಕರಿಗೆ ವಿದೇಶ ಪ್ರವಾಸ ಭಾಗ್ಯ ಕಲ್ಪಿಸಿರುವುದಕ್ಕೆ ಸಂಘದ ವತಿಯಿಂದ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು. 

ರಾಜ್ಯ ಸರ್ಕಾರ ವಿಶೇಷವಾಗಿ ಪೌರ ಕಾರ್ಮಿಕರ ಬಗ್ಗೆ ಹೆಚ್ಚಿನ ಒತ್ತು ನೀಡಿದೆ. ಗೃಹಭಾಗ್ಯ, ಗುತ್ತಿಗೆ ಕಾರ್ಮಿಕರ ಖಾಯಮಾತಿ, ಆರೋಗ್ಯ ತಪಾಸಣೆ, ಹೆಪಟೈಟಿಸ್ ಬಿ ಲಸಿಕೆ ಶಿಬಿರ, ಉಪಹಾರ ಭಾಗ್ಯ ಹೀಗೆ ಅನೇಕ ಯೋಜನೆಯನ್ನು ಪೌರ ಕಾರ್ಮಿಕರ ಏಳಿಗೆಗೆ ಕೈಗೊಂಡಿದೆ. ಪೌರ ಕಾರ್ಮಿಕರು ಇದರ ಸದುಪಯೋಗ ಪಡೆದುಕೊಂಡು ಉತ್ತಮ ಜೀವನ ನಡೆಸಬೇಕು ಎಂದರು.

ಈ ವೇಳೆ ಸಿಂಗಾಪುರ ಪ್ರವಾಸ ಕೈಗೊಳ್ಳಲಿರುವ ಪೌರ ಕಾರ್ಮಿಕರಾದ ಮಂಜುನಾಥ್, ಮಾರಪ್ಪ, ವೇಲಾಯುಧನ್, ಚೆಲುವ ಅವರನ್ನು ಸನ್ಮಾನಿಸಲಾಯಿತು. 

ಕಾರ್ಯಕ್ರಮದಲ್ಲಿ ಪರಿಸರ ಅಭಿಯಂತರ ಪ್ರಭಾಕರ್, ನಗರಸಭೆ ಸದಸ್ಯರಾದ ಉಷಾ ಎನ್., ಸಂತೋಷ್ ಆರ್. ಶೇಟ್, ನಿಸಾರ್ ಅಹ್ಮದ್, ವ್ಯವಸ್ಥಾಪಕ ಸಂತೋಷ್ ಕುಮಾರ್, ಕಂದಾಯ ನಿರೀಕ್ಷಕ ಹೇಮಂತ್  ಮತ್ತಿತರರಿದ್ದರು. ಹಿರಿಯ ಆರೋಗ್ಯ ನಿರೀಕ್ಷಕ ಶೈಲೇಶ್ ಕಾರ್ಯಕ್ರಮ ನಿರ್ವಹಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X