ಮಂಡ್ಯ: ತಾಲೂಕು ದಸರಾ ಕ್ರೀಡಾಕೂಟಕ್ಕೆ ಚಾಲನೆ

ಮಂಡ್ಯ, ಆ.27: ನಗರದ ಸರ್.ಎಂ.ವಿ. ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಡೆದ ಮಂಡ್ಯ ತಾಲೂಕು ದಸರಾ ಕ್ರೀಡಾಕೂಟಕ್ಕೆ ವಿಧಾನಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ರವಿವಾರ ಚಾಲನೆ ನೀಡಿದರು.
ಈ ವೇಳೆ ಕೆ.ಟಿ.ಶ್ರೀಕಂಠೇಗೌಡ ಮಾತನಾಡಿ, ದಸರಾ ಹಬ್ಬದ ಹಿನ್ನೆಲೆಯಲ್ಲಿ ಸಾಹಿತ್ಯ-ಸಾಂಸ್ಕೃತಿಕ ಚಟುವಟಿಕೆಗಳ ಜತೆಗೆ ಕ್ರೀಡಾ ಚಟುವಟಿಕೆ ನಡೆಸುವ ಪರಂಪರೆ ಇಟ್ಟುಕೊಂಡಿರುವುದು ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಡಿ. ಮಂಜುನಾಥ್, ತಹಸೀಲ್ದಾರ್ ನಾಗೇಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಬಿ.ವಿ. ನಂದೀಶ್, ದೈಹಿಕ ಶಿಕ್ಷಣದ ಪ್ರಭಾರ ಅಧೀಕ್ಷಕ ಪರಮೇಶ್, ಇತರರು ಹಾಜರಿದ್ದರು.
Next Story





