ಕಿರಿಮಂಜೇಶ್ವರದಲ್ಲಿ ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು

ಉಡುಪಿ, ಆ.28: ಬೈಕ್ ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಿರಿಮಂಜೇಶ್ವರ ರಾ.ಹೆ.66ರಲ್ಲಿ ನಡೆದಿದೆ.
ಮೃತಪಟ್ಟವರನ್ನು ಮರವಂತೆಯ ಗಾಡಿಮನೆ ವೆಂಕಪ್ಪ ಖಾರ್ವಿ ಎಂಬವರ ಪುತ್ರ ಶ್ರೀಕಾಂತ ಖಾರ್ವಿ(24) ಎಂದು ಗುರುತಿಸಲಾಗಿದೆ. ಕುಂದಾಪುರದಿಂದ ಭಟ್ಕಳಕ್ಕೆ ಸಾಗುತ್ತಿದ್ದ ಬಸ್ ಬೈಕ್ ಗೆ ಢಿಕ್ಕಿ ಹೊಡೆದಿದೆ. ಶ್ರೀಕಾಂತ ಖಾರ್ವಿ ಉಪ್ಪುಂದದಿಂದ ಕುಂದಾಪುರಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





