ಬೆಂಗಳೂರು: ಯುವಕನ ಕೊಲೆ

ಬೆಂಗಳೂರು, ಆ.28: ಗಣೇಶನ ಪ್ರತಿಷ್ಠಾಪನಾ ಸ್ಥಳಕ್ಕೆ ಮದ್ಯದ ಸೇವಿಸಿ ಬಂದ ಯುವಕನೊಬ್ಬನನ್ನು ಆರೇಳು ಮಂದಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದಿರುವ ಘಟನೆ ಹನುಮಂತ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಶ್ರೀನಗರದ ನಿವಾಸಿ ಗಣೇಶ್(21) ಎಂಬಾತ ಕೊಲೆಯಾಗಿರುವ ಯುವಕ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ವಿವರ: ಅವಲಹಳ್ಳಿ ಮುಖ್ಯರಸ್ತೆಯಲ್ಲಿ ಪೃಥ್ವಿ ಎಂಬಾತ ಸೇರಿ ಪ್ರಮುಖರು ಗಣೇಶನ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದರು. ರವಿವಾರ ರಾತ್ರಿ 7:30 ಸುಮಾರಿಗೆ ಮದ್ಯದ ಅಮಲಿನಲ್ಲಿ ಬಂದ ಗಣೇಶ ಹಾಗೂ ಪೃಥಿ ನಡುವೆ ಜಗಳ ಉಂಟಾಗಿದೆ. ಇದರಿಂದ ಆಕ್ರೋಶಗೊಂಡ ಪೃಥ್ವಿ ಸ್ನೇಹಿತರು ಮಾರಕಾಸ್ತ್ರಗಳಿಂದ ಗಣೇಶ್ ಹೊಟ್ಟೆ, ಎದೆ ಭಾಗಕ್ಕೆ ಇರಿದು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಗಂಭೀರವಾಗಿ ಗಾಯಗೊಂಡಿದ್ದ ಗಣೇಶ್‌ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಈ ಸಂಬಂಧ ಪ್ರಕರಣ ದಾಖಲಿಸಿರುವ ಹನುಮಂತ ನಗರ ಪೊಲೀಸರು ಆರೋಪಿಗಳ ಪತ್ತೆಗಾಗಿ ತನಿಖೆ ನಡೆಸುತ್ತಿದ್ದಾರೆ.
Next Story





