ಸಾಗರ: ವಿದ್ಯಾರ್ಥಿನಿ ಆತ್ಮಹತ್ಯೆ

ಸಾಗರ, ಆ.28: ತಾಲೂಕಿನ ಆವಿನಹಳ್ಳಿಯ ಹಾಲೆಸರ-ಜಂಬೆ ಗ್ರಾಮದ ವಿದ್ಯಾರ್ಥಿನಿಯೋರ್ವಳು ಭಾನುವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆವಿನಹಳ್ಳಿಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಶ್ವೇತಾ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ.
ಹೆಚ್ಚಾಗಿ ಮೊಬೈಲ್ ನೋಡಬೇಡ ಎಂದು ಮನೆಯವರು ಹೇಳಿರುವುದನ್ನು ಗಂಭೀರವಾಗಿ ಪರಿಗಣಿಸಿ ಶ್ವೇತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತಳ ತಂದೆ ವಿಕ್ರಮ್ ಗ್ರಾಮಾಂತರ ಠಾಣೆಯಲ್ಲಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
Next Story





