ಆ.29ರಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆ
ಉಡುಪಿ, ಆ.28: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ಅಜ್ಜರಕಾಡಿನ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ದೈಹಿಕ ಶಿಕ್ಷಣ ವಿಭಾಗ, ಲಯನ್ಸ್ ಕ್ಲಬ್ ಪರ್ಕಳ ಹಾಗೂ ಉಡುಪಿ ಜಿಲ್ಲಾ ವಿವಿಧ ಕ್ರೀಡಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮ ಆ.29ರಂದು ಬೆಳಗ್ಗೆ 10:00 ಗಂಟೆಗೆ ಅಜ್ಜರಕಾಡು ಪುರಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ರಾಜ್ಯ ಕ್ರೀಡೆ, ಮೀನುಗಾರಿಕೆ ಮತ್ತು ಯುವಜನ ಸಬಲೀಕರಣ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸುವರು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.
Next Story