ಮಂಡ್ಯ: ಆ.29ರಂದು ರೈತರ ರಾಜ್ಯಮಟ್ಟದ ಅಧ್ಯಯನ ಶಿಬಿರ
ಮಂಡ್ಯ, ಆ.28: ಕರ್ನಾಟಕ ಪ್ರಾಂತ ರೈತಸಂಘದ ವತಿಯಿಂದ ನಗರದ ಎಸ್.ಬಿ.ಸಮುದಾಯ ಭವನದಲ್ಲಿ ಆ.29ರಂದು ಬೆಳಗ್ಗೆ 11ಕ್ಕೆ ರೈತರ ರಾಜ್ಯಮಟ್ಟದ ಅಧ್ಯಯನ ಶಿಬಿರ ಏರ್ಪಡಿಸಲಾಗಿದೆ.
ಸ್ವಾಗತ ಸಮಿತಿ ಅಧ್ಯಕ್ಷ ಶಿವಮೂರ್ತಿ ಕೀಲಾರ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಡಾ.ಪ್ರಕಾಶ್ ಕಮ್ಮರಡಿ ಶಿಬಿರ ಉದ್ಘಾಟಿಸಲಿದ್ದು, ಪ್ರಾಂತ ರೈತಸಂಘದ ರಾಜ್ಯಾಧ್ಯಕ್ಷ ಜಿ.ಸಿ.ಬಯ್ಯಾರೆಡ್ಡಿ, ಸಮಾಜ ಸೇವಕ ರಾಧಾಕೃಷ್ಣ ಕೆ.ಕೆ., ಪ್ರಾಂತ ಕೃಷಿಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷ ಎಂ.ಪುಟ್ಟಮಾದು ಭಾಗವಹಿಸಲಿದ್ದಾರೆ.
ವಿಚಾರ ಸಂಕಿರಣ: ಶಿಬಿರದ ಅಂಗವಾಗಿ ನಗರದ ರೈತಸಭಾಂಗಣದಲ್ಲಿ ಆ.30 ರಂದು ಸಂಜೆ 6ಕ್ಕೆ ಜಾನುವಾರು ಮಾರಾಟ ನಿರ್ಬಂಧ ನಿಯಮಾವಳಿ ಹಾಗೂ ರೈತರ ಮೇಲಾಗುವ ಪರಿಣಾಮಗಳು ಕುರಿತು ರಾಜ್ಯಮಟ್ಟದ ವಿಚಾರ ಸಂಕಿರಣ ಏರ್ಪಡಿಸಲಾಗಿದೆ.
ಶಿವಮೂರ್ತಿ ಅವರ ಅಧ್ಯಕ್ಷತೆಯಲ್ಲಿ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ ವಿಚಾರ ಮಂಡಿಸಲಿದ್ದು, ಮನ್‍ಮುಲ್ ಅಧ್ಯಕ್ಷ ಕದಲೂರು ರಾಮಕೃಷ್ಣ, ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷೆ ಮೀರಾ ಶಿವಲಿಂಗಯ್ಯ, ಕರ್ನಾಟಕ ಪ್ರಾಂತ ರೈತಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಯು.ಬಸವರಾಜು, ಸಿಐಟಿಯು ಜಿಲ್ಲಾಧ್ಯಕ್ಷ ಜಿ.ರಾಮಕೃಷ್ಣ ಅತಿಥಿಗಳಾಗಿ ಭಾಗವಹಿಸಲಿದ್ದಾರೆಂದು ಪ್ರಕಟನೆ ತಿಳಿಸಿದೆ.







