ಅಜೆಕಾರು : ಮನೆಗೆ ನುಗ್ಗಿ ಕಳವಿಗೆ ಯತ್ನ
ಅಜೆಕಾರು, ಆ.28: ಮರ್ಣೆ ಗ್ರಾಮದ ಕಾಡುಹೊಳೆ ಎಂಬಲ್ಲಿ ಆ.27 ರಂದು ರಾತ್ರಿ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಕಳವಿಗೆ ಯತ್ನಿಸಿರುವ ಬಗ್ಗೆ ವರದಿಯಾಗಿದೆ.
ಕೆ.ಗೋಪಾಲ ಪೈ ಎಂಬವರ ಮನೆಯಲ್ಲಿ ಎಲ್ಲರು ಮಲಗಿದ್ದ ವೇಳೆ ಮನೆಯ ಹಿಂಬದಿಯ ಬಚ್ಚಲು ಕೋಣೆಯ ಮಾಡಿನ ಹೆಂಚು ತೆಗೆದು ಒಳ ಪ್ರವೇಶಿಸಿದ ಕಳ್ಳರು, ಮನೆಯ ಸ್ಟೋರ್ ರೂಮಿನಲ್ಲಿರುವ ಕಬ್ಬಿಣದ ಕಪಾಟಿನ ಬಾಗಿಲು ತೆಗೆದು ಬಟ್ಟೆ ಮತ್ತಿತರ ಸೊತ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿ ಕಳವಿಗೆ ಪ್ರಯತ್ನ ಮಾಡಿರುವುದು ತಿಳಿದುಬಂದಿದೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





