Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಪಿಎಲ್ ಕಾರ್ಡ್ : ಕಾಂಗ್ರೆಸ್ - ಬಿಜೆಪಿ...

ಬಿಪಿಎಲ್ ಕಾರ್ಡ್ : ಕಾಂಗ್ರೆಸ್ - ಬಿಜೆಪಿ ಸದಸ್ಯರ ನಡುವೆ ವಾಕ್ಸಮರ!

ಶಿವಮೊಗ್ಗ ಜಿ.ಪಂ. ಸಾಮಾನ್ಯ ಸಭೆಯಲ್ಲಿ ಕಾವೇರಿದ ಚರ್ಚೆ

ವಾರ್ತಾಭಾರತಿವಾರ್ತಾಭಾರತಿ29 Aug 2017 5:39 PM IST
share
ಬಿಪಿಎಲ್ ಕಾರ್ಡ್ : ಕಾಂಗ್ರೆಸ್ - ಬಿಜೆಪಿ ಸದಸ್ಯರ ನಡುವೆ ವಾಕ್ಸಮರ!

ಶಿವಮೊಗ್ಗ, ಆ. 29: ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿ.ಪಂ. ಸಾಮಾನ್ಯ ಸಭೆಯಲ್ಲಿ ಬಿಪಿಎಲ್ ಕಾರ್ಡ್ ವಿಷಯಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಕಾಂಗ್ರೆಸ್ ಹಾಗೂ ವಿರೋಧ ಪಕ್ಷ ಬಿಜೆಪಿ ಸದಸ್ಯರ ನಡುವೆ ಕಾವೇರಿದ ಚರ್ಚೆ ನಡೆಯಿತು. ಮಾತಿನ ಚಕಮಕಿ ನಡೆದು, ಆರೋಪ-ಪ್ರತ್ಯಾರೋಪಗಳ ವಿನಿಮಯವಾಯಿತು. ಕೆಲ ಸಮಯ ಗದ್ದಲದ ವಾತಾವರಣ ಸೃಷ್ಟಿಯಾಗಿತ್ತು.

ಸಭೆ ಆರಂಭವಾಗುತ್ತಿದ್ದಂತೆ ಬಿಪಿಎಲ್ ಕಾರ್ಡ್ ವಿತರಣೆಯಲ್ಲಾಗುತ್ತಿರುವ ವಿಳಂಬದ ಕುರಿತಂತೆ ಮಂಡನೆಯಾಗಿದ್ದ ನಿಲುವಳಿಯ ಮೇಲೆ ಚರ್ಚೆ ಆರಂಭವಾಯಿತು. ಬಿಜೆಪಿ ಸದಸ್ಯರಾದ ಆರ್.ಸಿ.ಮಂಜುನಾಥ್‍ರವರು ಕಾರ್ಡ್ ವಿತರಣೆಯಲ್ಲಾಗುತ್ತಿರುವ ವಿಳಂಬದಿಂದ ನಾಗರೀಕರು ಸಾಕಷ್ಟು ತೊಂದರೆ ಎದುರಿಸುತ್ತಿದ್ದಾರೆ. ಒಂದೆಡೆ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ ಅಕ್ಕಿ ನೀಡುತ್ತಿದ್ದೆವೆ ಎಂದು ಹೇಳುತ್ತದೆ. ಮತ್ತೊಂದೆಡೆ ಕಾರ್ಡ್ ನೀಡದೆ ಸತಾಯಿಸುತ್ತಿದೆ. ಯಾವಾಗ ಕಾರ್ಡ್ ನೀಡಲಾಗುತ್ತದೆ ಎಂಬುವುದರ ಬಗ್ಗೆ ಸಭೆಗೆ ಸೂಕ್ತ ಮಾಹಿತಿ ಕೊಡಿಸುವಂತೆ ಆಗ್ರಹಿಸಿದರು.

ಈ ವೇಳೆ ಸಿಇಓ ಡಾ. ಕೆ. ರಾಕೇಶ್‍ಕುಮಾರ್‍ರವರು ಕಾರ್ಡ್ ವಿತರಣೆಗೆ ಸಂಬಂಧಿಸಿದ ಮಾಹಿತಿ ನೀಡುವಂತೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪ ನಿರ್ದೇಶಕರಿಗೆ ಸೂಚನೆ ನೀಡಿದರು. ಅದರಂತೆ ಅಧಿಕಾರಿ ಲಕ್ಷೀನಾರಾಯಣ ರೆಡ್ಡಿಯವರು ಸಭೆಗೆ ಸವಿವರವಾದ ಮಾಹಿತಿ ನೀಡಿದರು.

ಇದಾದ ನಂತರ ಬಿಜೆಪಿ ಸದಸ್ಯ ಕೆ.ಇ.ಕಾಂತೇಶ್‍ರವರು ಮಾತನಾಡಿ, ಜಿಲ್ಲೆಯಲ್ಲಿ ಕಾಲಮಿತಿಯಲ್ಲಿ ಕಾರ್ಡ್ ವಿತರಣೆ ಮಾಡುವ ವ್ಯವಸ್ಥೆಯಾಗಬೇಕು. ರಾಜ್ಯ ಸರ್ಕಾರದ ಕ್ರಮದಿಂದ ಕಾರ್ಡ್ ವಿತರಣೆಯಲ್ಲಿ ವಿಳಂಬವಾಗುವಂತಾಗಿದ್ದು, ನಾಗರಿಕರು ತೊಂದರೆ ಅನುಭವಿಸುವಂತಾಗಿದೆ ಎಂದು ದೂರಿದರು.

ಈ ವೇಳೆ ಕಾಂಗ್ರೆಸ್ ಸದಸ್ಯ ಕಲಗೋಡು ರತ್ನಾಕರ್‍ರವರು ಮಾತನಾಡಿ, ರಾಜ್ಯ ಸರ್ಕಾರ ಉತ್ತಮ ಕ್ರಮಕೈಗೊಂಡಿದೆ. ಕಾಲಮಿತಿಯಲ್ಲಿ ಕಾರ್ಡ್ ವಿತರಣೆ ಮಾಡಲು ಸೂಕ್ತ ಕ್ರಮಕೈಗೊಂಡಿದೆ ಎಂದು ಸರ್ಕಾರದ ಕ್ರಮವನ್ನು ಸಮರ್ಥನೆ ಮಾಡಿಕೊಂಡರು. ಈ ಸಂದರ್ಭದಲ್ಲಿ ಕಾಂತೇಶ್ ಹಾಗೂ ಕಲಗೋಡು ರತ್ನಾಕರ್‍ರವರ ನಡುವೆ ಮಾತಿನ ಚಕಮಕಿ ನಡೆಯಿತು. ಇಬ್ಬರು ಸದಸ್ಯರ ನಡುವೆ ಆರೋಪ-ಪ್ರತ್ಯಾರೋಪಗಳ ವಿನಿಮಯವಾಯಿತು.

ಈ ನಡುವೆ ಸಭೆಯಲ್ಲಿದ್ದ ವಿಧಾನಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್ ಮಾತನಾಡಿ, ಸರ್ಕಾರದ ವಿರುದ್ದ ಆರೋಪ ಸರಿಯಲ್ಲವೆಂದರು. ಇದಕ್ಕೆ ಕೆ.ಇ.ಕಾಂತೇಶ್ ಆಕ್ರೋಶ ವ್ಯಕ್ತಪಡಿಸಿದರು. ಆರ್.ಪ್ರಸನ್ನಕುಮಾರ್ ಹಾಗೂ ಕಾಂತೇಶ್ ನಡುವೆ ವಾಕ್ಸಮರ ನಡೆಯಿತು.

ಈ ಹಂತದಲ್ಲಿಯೇ ಇಬ್ಬರು ಸದಸ್ಯರ ಪರವಾಗಿ ಎರಡು ಪಕ್ಷಗಳ ಸದಸ್ಯರು ಸಮರ್ಥನೆ ಮಾಡಿಕೊಂಡು ಮಾತನಾಡಲಾರಂಭಿಸಿದರು. ಕೆಲ ಸಮಯ ಏರುಧ್ವನಿಯಲ್ಲಿ ಸದಸ್ಯರು ಮಾತನಾಡಿದರು. ಇದರಿಂದ ಸಭೆಯಲ್ಲಿ ಗದ್ದಲದ ವಾತಾವರಣ ಸೃಷ್ಟಿಯಾಗಿ ಯಾರು ಏನೂ ಮಾತನಾಡುತ್ತಿದ್ದಾರೆ ಎಂಬುವುದೇ ತಿಳಿಯದಂತಹ ಸ್ಥಿತಿ ನಿರ್ಮಾಣವಾಯಿತು.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಬಿಜೆಪಿ ಸದಸ್ಯ ವೀರಭದ್ರಪ್ಪ ಪೂಜಾರ್ ಮಾತನಾಡಲು ಮುಂದಾದಾಗ ಸಿಇಓರವರು ಬೇರೆ ವಿಷಯ ಪ್ರಸ್ತಾಪಕ್ಕೆ ಮುಂದಾದರು. ಇದಕ್ಕೆ ಕೆಂಡಾಮಂಡಲವಾದ ವೀರಭದ್ರಪ್ಪ ಪೂಜಾರ್‍ರವರು, ಸಿಇಓ ವಿರುದ್ದ ಗರಂ ಆಗಿ ಸಿಡಿಮಿಡಿಗೊಂಡರು. 'ಕಾಂಗ್ರೆಸ್ ಸದಸ್ಯರು ಮಾತನಾಡುವಾಗ ಅಡ್ಡಿ ಮಾಡುವುದಿಲ್ಲ. ನಾವು ಮಾತನಾಡಲು ಮುಂದಾದರೆ ಅಡ್ಡಿ ಮಾಡುವುದೇಕೆ?' ಎಂದು ಬಿಜೆಪಿ ಸದಸ್ಯರು ಹರಿಹಾಯ್ದರು.

ಅಂತಿಮವಾಗಿ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್‍ರವರು ಮಧ್ಯಪ್ರವೇಶಿಸಿ ಸದಸ್ಯರನ್ನು ಸುಮ್ಮನಿರುವಂತೆ ಮನವಿ ಮಾಡಿದರು. ಹೊಸದಾಗಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ ಕಾಲಮಿತಿಯಲ್ಲಿ ಬಿಪಿಎಲ್ ಪಡಿತರ ಚೀಟಿ ವಿತರಣೆ ಮಾಡಬೇಕು. ಈ ವಿಷಯದಲ್ಲಿ ಯಾವುದೇ ವಿಳಂಬಕ್ಕೆ ಆಸ್ಪದವಾಗದಂತೆ ಎಚ್ಚರವಹಿಸಬೇಕು ಎಂದು ಆಹಾರ ಇಲಾಖೆಯ ಉಪ ನಿರ್ದೇಶಕರಿಗೆ ತಾಕೀತು ಮಾಡಿದರು.

47,961 ಅರ್ಜಿ ಸಲ್ಲಿಕೆ : 15 ಹಂತಗಳಲ್ಲಿ ಪರಿಶೀಲನೆ!

ಜಿಲ್ಲೆಯ ಏಳು ತಾಲೂಕು ವ್ಯಾಪ್ತಿಯಲ್ಲಿ ಆನ್‍ಲೈನ್ ಮೂಲಕ ಎರಡು ಹಂತಗಳಲ್ಲಿ ಬಿಪಿಎಲ್ ಕಾರ್ಡ್ ಕೋರಿ 47,961 ಅರ್ಜಿಗಳು ಸಲ್ಲಿಕೆಯಾಗಿವೆ. ಇದರಲ್ಲಿ 2996 ಅರ್ಜಿಗಳ ಪರಿಶೀಲನೆ ಬಾಕಿಯಿದ್ದು, ಎಲ್ಲ ಅರ್ಜಿಗಳ ಸ್ಥಳ ಪರಿಶೀಲನೆ ನಡೆಸಲಾಗಿದೆ. ಅರ್ಜಿಗಳ ಪರಿಶೀಲನೆಯಲ್ಲಿ ಶಿವಮೊಗ್ಗ ಜಿಲ್ಲೆಯು ಇಡೀ ರಾಜ್ಯದಲ್ಲಿಯೇ ಮುಂದಿದೆ' ಎಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಲಕ್ಷ್ಮೀನಾರಾಯಣ ರೆಡ್ಡಿ ಜಿ.ಪಂ. ಸಭೆಗೆ ಮಾಹಿತಿ ನೀಡಿದ್ದಾರೆ.

ಮೊದಲ ಹಂತದಲ್ಲಿ 37,714 ಅರ್ಜಿಗಳು ಬಂದಿದ್ದು, ಎಲ್ಲ ಅರ್ಜಿಗಳ ಪರಿಶೀಲನೆ ನಡೆಸಲಾಗಿದೆ. ಇದರಲ್ಲಿ 25,597 ಅರ್ಜಿಗಳು ಡೇಟಾ ಎಂಟ್ರಿ ಕೂಡ ಮಾಡಲಾಗಿದೆ. 18,666 ಅರ್ಜಿಗಳನ್ನು ಕಾರ್ಡ್ ಮುದ್ರಣಕ್ಕೆ ಕಳುಹಿಸಿ ಕೊಡಲಾಗುತ್ತಿದೆ. ಎರಡನೇ ಹಂತದಲ್ಲಿ 16,247 ಅರ್ಜಿಗಳು ಸ್ವೀಕೃತವಾಗಿವೆ. ಅರ್ಜಿ ಸ್ವೀಕರಿಸಿದ ಹಂತದಿಂದ ಕಾರ್ಡ್ ವಿತರಣೆ ಮಾಡುವವರೆಗೂ ಒಟ್ಟಾರೆ 15 ಹಂತಗಳಲ್ಲಿ ಪರಿಶೀಲನಾ ಕಾರ್ಯ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X