Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿಡ್ಲಘಟ್ಟ : ಮದ್ಯವರ್ಜನ ಶಿಬಿರವನ್ನು...

ಶಿಡ್ಲಘಟ್ಟ : ಮದ್ಯವರ್ಜನ ಶಿಬಿರವನ್ನು ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ29 Aug 2017 5:50 PM IST
share
ಶಿಡ್ಲಘಟ್ಟ : ಮದ್ಯವರ್ಜನ ಶಿಬಿರವನ್ನು ಉದ್ಘಾಟನೆ

ಶಿಡ್ಲಘಟ್ಟ,ಆ.29 : ದುಡಿಮೆಯ ಬಹುಪಾಲು ಹಣವನ್ನು ಮದ್ಯಪಾನದಂತಹ ದುಶ್ಚಟಗಳಿಗೆ ವಿನಿಯೋಗಿಸಿ ಕುಟುಂಬಗಳು ಆರ್ಥಿಕ ಹಿನ್ನೆಡೆಯತ್ತ ಸಾಗುತ್ತಿವೆ. ಮದ್ಯಪಾನದ ಪಿಡುಗಿನಿಂದ ನಾಶವಾಗುತ್ತಿರುವ ಕುಟುಂಬಗಳನ್ನು ರಕ್ಷಿಸಿ ಆರ್ಥಿಕವಾಗಿ ಮುಂದೆ ತರಲು ಮದ್ಯವರ್ಜನ ಶಿಬಿರವನ್ನು ಜಿಲ್ಲೆಯಲ್ಲಿಯೇ ಪ್ರಥಮವಾಗಿ ಶಿಡ್ಲಘಟ್ಟದಲ್ಲಿ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಮಾಜಿ ಶಾಸಕ ವಿ.ಮುನಿಯಪ್ಪ ತಿಳಿಸಿದರು.

 ತಾಲ್ಲೂಕಿನ ವರದನಾಯಕನಹಳ್ಳಿಯ ಶ್ರೀ ಪಟಾಲಮ್ಮ ಮತ್ತು ವೀರ ಸೊಣ್ಣಮ್ಮ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಬಿವೃದ್ಧಿ ಯೋಜನೆಯಿಂದ ಹಮ್ಮಿಕೊಂಡಿರುವ 1106ನೇ ಮದ್ಯವರ್ಜನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

 ಮದ್ಯಪಾನ ಎಂಬುವುದು ತನ್ನನ್ನು ಹಾಳು ಮಾಡುವುದಲ್ಲದೆ ಜೊತೆಗೆ ಇಡೀ ಕುಟುಂಬದ ಸುಖ ನೆಮ್ಮದಿ ಹಾಳು ಮಾಡುತ್ತದೆ. ಆದ್ದರಿಂದ ಎಲ್ಲಾ  ದುಶ್ಚಟಗಳಿಂದ ದೂರ ಉಳಿದರೆ ಮಾತ್ರ ನೆಮ್ಮದಿ ಬದುಕು ಸಾಧ್ಯ. ದುಶ್ಚಟಗಳಿಂದ ಮನುಷ್ಯ ತನ್ನ ಭವಿಷ್ಯವನ್ನು ಕಳೆದುಕೊಳ್ಳುತ್ತಿದ್ದು, ಸಮಾಜದಲ್ಲಿ ತನ್ನ ವ್ಯಕ್ತಿತ್ವ ಕಳೆದುಕೊಳ್ಳುತ್ತಾನೆ. ಯುವಕರು ಇಂದು ದುಶ್ಚಟಗಳ ದಾಸರಾಗುತ್ತಿರುವುದು ವಿಪರ್ಯಾಸ ಎಂದರು. 

 ಹಾಪ್ ಕಾಮ್ಸ್ ಅಧ್ಯಕ್ಷ ಮುತ್ತೂರು ಚಂದ್ರೇಗೌಡ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯವರು ನಮ್ಮ ತಾಲ್ಲೂಕಿನಲ್ಲಿ ಮದ್ಯವರ್ಜನ ಶಿಬಿರ ಆಯೋಜಿಸಿರುವುದರಿಂದ ಈ ಭಾಗದ ಬಡ ಜನರಿಗೆ ಮದ್ಯಪಾನ ಬಿಡಿಸುವ ಮೂಲಕ ಅವರ ಬದುಕಿಗೆ ಆಶಾಕಿರಣವಾಗಿದೆ. ಶಿಬಿರದಲ್ಲಿರುವ ಎಲ್ಲ ಶಿಬಿರಾರ್ಥಿಗಳು ಇದರಿಂದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಿಬಿರಾರ್ಥಿಗಳಿಗೆ ಕಿವಿಮಾತು ಹೇಳಿದರು.

 ಈ ಮದ್ಯವರ್ಜನ ಶಿಬಿರ ಏಳು ದಿನಗಳ ಕಾಲ ನಡೆಯಲಿದ್ದು ಇದರಲ್ಲಿ ಶಿಬಿರಾರ್ಥಿಗಳಿಗೆ ಬೋಧನೆ ಜೊತೆಗೆ ಆಟ, ಪಾಠ, ಯೋಗ ಇತ್ಯಾದಿ ಇರುತ್ತದೆ. ಮಾನವನಾದ ಮೇಲೆ ತಪ್ಪು ಮಾಡುವುದು ಸಹಜ, ತಿದ್ದಿ ನಡೆಯುವವನೇ ಮನುಜ ಎಂದರು.

 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಬಿವೃದ್ಧಿ ಯೋಜನಾಧಿಕಾರಿ ಮೋಹನ್ ಮಾತನಾಡಿ, ಈ ಶಿಬಿರ ಒಂದು ವಾರ ನಡೆಯುತ್ತಿದ್ದು ಶಿಬಿರಾರ್ಥಿಗಳನ್ನು ಅವರ ಸ್ವಂತ ಇಚ್ಛೆಯ ಮೇಲೆ ಅಥವಾ ಅವರ ಕುಟುಂಬದವರ ಒಪ್ಪಿಗೆ ಪಡೆದು ಶಿಬಿರಕ್ಕೆ ಸೇರಿಸಿಕೊಂಡು ಪ್ರತಿ ದಿನ ಬೆಳಗ್ಗೆ 5 ರಿಂದ ರಾತ್ರಿ 10 ಗಂಟೆಯ ತನಕ ಯೋಗ, ಮಾರ್ಗದರ್ಶನ, ವೈದ್ಯರಿಂದ ತಪಾಸಣೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಗುತ್ತದೆ.ಏಳು ದಿನಗಳ ಕಾಲ ನಡೆಯುವ ಮದ್ಯವರ್ಜನ ಶಿಬಿರದಲ್ಲಿ ಶಿಬಿರಾರ್ಥಿಗಳಿಗೆ ಊಟದ ವ್ಯವಸ್ಥೆ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಶಿಬಿರದಲ್ಲೇ ಮಾಡಲಾಗಿದೆ. ಶಿಬಿರದಲ್ಲಿ ಮದ್ಯಪಾನದಿಂದಾಗುವ ದುಷ್ಟಪರಿಣಾಮಗಳು ಹಾಗೂ ಮದ್ಯಪಾನ ಬಿಡಲು ಯಾವ ರೀತಿಯ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ವಿವರವಾಗಿ ತಿಳಿಸಿ ಮದ್ಯಪಾನ ಬಿಡುವಂತೆ ಮಾಡಲಾಗುವುದು. ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಮದ್ಯವ್ಯಸನಿಗಳು ಸಂಯಮದಿಂದ ಇದ್ದು, ಕಾರ್ಯಕ್ರಮ ಮುಗಿದ ನಂತರ ಮದ್ಯಪಾನ ಬಿಟ್ಟು ಸಂತೋಷವಾಗಿ ಬಾಳಿ ಎಂದು ಹೇಳಿದರು.

 ಮದ್ಯವರ್ದನ ಶಿಬಿರ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದೇವರಾಜ್, ಉಪಾಧ್ಯಕ್ಷ ಎ.ಎಂ. ತ್ಯಾಗರಾಜ್, ಹಂಡಿಗನಾಳ ಗ್ರಾಮ ಪಂಚಾಯ್ತಿ ಅಧ್ಯಕ್ಷ ಮುನಿಯಪ್ಪ, ಶ್ರೀನಿವಾಸಮೂರ್ತಿ, ಎಚ್.ಎಂ.ಮುನಿರಾಜು, ಪಟಾಲಮ್ಮ ವೀರಸೊಣ್ಣಮ್ಮ ದೇವಾಲಯ ಸಮಿತಿಯ ಕೋಶಾಧಿಕಾರಿ ನಾಗರಾಜಪ್ಪ, ಯೋಜನಾಧಿಕಾರಿ ದಿನೇಶ್, ಶಿಬಿರಾಧಿಕಾರಿ ರಾಘವೇಂದ್ರ, ಮಾಣಿಕ್ಯಮ್ಮ, ಮೇಲ್ವಿಚಾರಕರಾದ ಶಶಿಕುಮಾರ್, ಮಮತಾ ಕಾರ್ಯಕ್ರಮದಲ್ಲಿ ಹಾಜರಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X