ಅಕ್ರಮ ಮರಳು ಸಾಗಾಟ: ಲಾರಿ ವಶ, ಚಾಲಕ ಪರಾರಿ
ಕೊಣಾಜೆ, ಆ. 29: ಅಕ್ರಮ ಮರಳು ಸಾಗಾಟ ನಡೆಸುತ್ತಿದ್ದ ಲಾರಿಯನ್ನು ನಾಟೆಕಲ್ ಬಳಿ ಕೊಣಾಜೆ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಪರಾರಿಯಾಗಿದ್ದಾನೆ.
ಹರೇಕಳ ಕಡೆಯಿಂದ ಮಂಜನಾಡಿ ಮಾರ್ಗವಾಗಿ ಅಕ್ರಮ ಮರಳನ್ನು ಕೇರಳಕ್ಕೆ ಸಾಗಾಟ ನಡೆಸಲಾಗುತ್ತಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಲಾರಿಯನ್ನು ನಿಲ್ಲಿಸಲೆತ್ನಿಸಿದಾಗ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಪ್ರಭಾರ ಇನ್ಸ್‌ಪೆಕ್ಟರ್ ಕೆ.ಎಂ. ಶರೀಫ್ ಮತ್ತು ಎಸ್‌ಐ ಸುಕುಮಾರ್ ಮತ್ತು ಸಿಬ್ಬಂದಿ ಭಾಗವಹಿಸಿದ್ದು, ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





