Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ತುಂಗಭದ್ರಾ ಜಲಾಶಯದಿಂದ ಕೃಷಿ ಬೆಳೆಗಳಿಗೆ...

ತುಂಗಭದ್ರಾ ಜಲಾಶಯದಿಂದ ಕೃಷಿ ಬೆಳೆಗಳಿಗೆ ನೀರು ಹರಿಸಲು ತೀರ್ಮಾನ: ಸಚಿವ ಸಂತೋಷ್ ಲಾಡ್

ವಾರ್ತಾಭಾರತಿವಾರ್ತಾಭಾರತಿ29 Aug 2017 7:28 PM IST
share
ತುಂಗಭದ್ರಾ ಜಲಾಶಯದಿಂದ ಕೃಷಿ ಬೆಳೆಗಳಿಗೆ ನೀರು ಹರಿಸಲು ತೀರ್ಮಾನ: ಸಚಿವ ಸಂತೋಷ್ ಲಾಡ್

ಬೆಂಗಳೂರು, ಆ. 29: ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಸುಮಾರು 6.50ಲಕ್ಷ ಎಕರೆ ಪ್ರದೇಶಗಳಲ್ಲಿ ರೈತರು ಕೃಷಿ ಆಧಾರಿತ ಬೆಳೆಗಳನ್ನು ಬೆಳೆದಿದ್ದು, ಮುಂಗಾರು ಹಂಗಾಮಿನ ಮಳೆ ಕ್ಷೀಣಿಸಿರುವುದರಿಂದ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಯಿಂದ ನೀರು ಬಿಡಲು ತೀರ್ಮಾನಿಸಲಾಯಿತು ಎಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್.ಲಾಡ್ ತಿಳಿಸಿದ್ದಾರೆ.

ಮಂಗಳವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ತನ್ನ ಅಧ್ಯಕ್ಷತೆಯಲ್ಲಿ ನಡೆದ ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆ ಬಳಿಕ ಮಾತನಾಡಿದ ಅವರು, ರೈತರು ಬೆಳೆದಿರುವ ಬೆಳೆಗಳಿಗೆ ತೊಂದರೆಯಾಗದಂತೆ 60ದಿನಗಳ ಕಾಲ 2800 ಕ್ಯೂಸೆಕ್ಸ್ ನೀರನ್ನು ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಯಿಂದ ನೀರು ಹರಿಸಲಾಗುವುದು ಎಂದು ಹೇಳಿದರು.

ಆನಂತರದ ದಿನಗಳಲ್ಲಿ ನೀರಿನ ಲಭ್ಯತೆ ಆಧರಿಸಿ 30 ದಿನಗಳ ಕಾಲ 3800 ಕ್ಯೂಸೆಕ್ಸ್ ನೀರನ್ನು ಬಿಡಲಾಗುವುದು ಎಂದ ಅವರು, ತುಂಗಭದ್ರಾ ಜಲಾಶಯದಲ್ಲಿ ಸುಮಾರು 75 ಟಿಎಂಸಿ ನೀರು ಸಂಗ್ರಹರುವ ಸಾಧ್ಯತೆ ಇದ್ದು, ಅದರಲ್ಲಿ ಆ ಭಾಗಕ್ಕೆ ಕುಡಿಯುವ ನೀರಿಗಾಗಿ 12 ಟಿಎಂಸಿ ನೀರು ಬೇಕಾಗುತ್ತದೆ. ಹಾಲಿ ಬೆಳೆದಿರುವ ಬೆಳೆಗಳಿಗೆ ಸುಮಾರು 33 ಟಿಎಂಸಿ ನೀರು ಬೇಕು. ಜಲಾಶಯದಲ್ಲಿ ಹಾಲಿ ಸಂಗ್ರಹವಿರುವ ನೀರಿನ ಲಭ್ಯತೆ ಆಧರಿಸಿ ಕುಡಿಯುವ ನೀರನ್ನು ಸಂಗ್ರಹಿಸಿ ಉಳಿಕೆ ನೀರಿನಲ್ಲಿ ಕೃಷಿ ಚಟುವಟಿಕೆಗಳಿಗೆ ನೀರು ಬಿಡಲಾಗುವುದು. ರೈತರು ಹೆಚ್ಚುವರಿ ಭತ್ತ ಬಿತ್ತನೆ ಮಾಡುವುದನ್ನು ನಿಲ್ಲಿಸಿ ಮಳೆ ಆಧಾರಿತ ಬೆಳೆಗಳನ್ನು ಬೆಳೆಯುವಂತೆ ಆ ಭಾಗದ ರೈತರಲ್ಲಿ ಮನವಿ ಮಾಡಿದರು.

ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಾಗುತ್ತಿರುವ ಹಿನ್ನೆಲೆಯಲ್ಲಿ 2018ರ ವರೆಗೆ ಆ ಭಾಗದ ಜನರಿಗೆ ಕುಡಿಯುವ ನೀರು ಸರಬರಾಜಿಗೆ ಎಲ್ಲ ಮುಂಜಾಗ್ರತಾ ಕ್ರಮ ಜರಗಿಸಿ ನೀರನ್ನು ಕಾಯ್ದಿರಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಜಲಾಶಯದಲ್ಲಿನ ನೀರಿನ ಲಭ್ಯತೆ ಆಧಾರದ ಮೇಲೆ ಕೃಷಿ ಚಟುವಟಿಕೆಗಳಿಗೆ ನೀರು ಬಿಡಲಾಗುವುದು ಎಂದರು.

ಸಭೆಯಲ್ಲಿ ರಾಯಚೂರು ಉಸ್ತುವಾರಿ ಸಚಿವ ತನ್ವೀರ್ ಸೇಠ್, ಕೊಪ್ಪಳ ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ, ಶಾಸಕರಾದ ಇಕ್ಬಾಲ್ ಅನ್ಸಾರಿ, ಭೀಮಾನಾಯ್ಕಾ, ಶಿವರಾಜ ತಂಗಡಗಿ, ಆನಂದ್‌ಸಿಂಗ್, ರಾಘವೇಂದ್ರ ಹಿಟ್ನಾಳ್, ಕೆ.ಸಿ.ಕೊಂಡಯ್ಯ, ಅಲ್ಲಂ ವೀರಭದ್ರಪ್ಪ, ಸಂಸದ ಕರಡಿ ಸಂಗಣ್ಣ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X