ಪ್ರತ್ಯೇಕ ಪ್ರಕರಣ: ಹತ್ತು ಆರೋಪಿಗಳ ಬಂಧನ

ಬೆಂಗಳೂರು, ಆ.29: ಕೊಲೆ, ಮನೆಗಳವು, ವಾಹನ ಕಳವು ನಡೆಸುತ್ತಿದ್ದ ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಿರುವ ಯಲಹಂಕ ಠಾಣೆ ಪೊಲೀಸರು, ಆರೋಪಿಗಳಿಂದ 4.20 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಚಿಕ್ಕಬಳ್ಳಾಪುರ ಹೊನ್ನಂಪಲ್ಲಿಯ ರಮೇಶ್(26), ರಾಮಾಂಜನಿ (22), ಲಕ್ಷ್ಮಿಪತಿ (26), ಚಂದ್ರ (23) ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ತಂಡ ಕಟ್ಟಿಕೊಂಡು ದರೋಡೆ ಸೇರಿದಂತೆ ಹಲವಾರು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ಆ.21 ರಂದು ಯಲಹಂಕ ಮಾರುತಿ ನಗರದ ಬಾಬು ಎಂಬುವರ ಮನೆಗೆ ನುಗ್ಗಿ ಚಿನ್ನಾಭರಣಗಳನ್ನು ಕಳವು ಮಾಡಿದ್ದರು ಎನ್ನುವ ಮಾಹಿತಿ ವಿಚಾರಣೆಯಲ್ಲಿ ತಿಳಿದುಬಂದಿದೆ.
ಆರೋಪಿಗಳನ್ನು ಬಂಧಿಸಿ, ವಿಚಾರಣೆ ನಡೆಸಿದಾಗ ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯ ಮಾಡಪಲ್ಲಿಯಲ್ಲಿ 2013ರಲ್ಲಿ ನಡೆದಿದ್ದ ಗೋವಿಂದಯ್ಯ ಎಂಬುವರನ್ನು ತಾವೆ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಬಂಧಿತರಿಂದ 4.20 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 2 ಬೈಕ್ ಸೇರಿದಂತೆ ಹಲವಾರು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆರು ಜನರ ಬಂಧನ: ಒಂಟಿಯಾಗಿ ಓಡಾಡುವವರನ್ನು ದರೋಡೆ ಮಾಡುತ್ತಿದ್ದ ಪ್ರಕರಣ ಸಂಬಂಧ 6 ಮಂದಿ ದರೋಡೆಕೋರರನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೊಡಿಗೇಹಳ್ಳಿಯ ಸುನಿಲ್(23), ರವಿ(23), ತೇಜು(25), ಅಪ್ಪಿ(24), ಮಾರುತಿ(24), ಸತೀಶ್(23) ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.
ಒಂಟಿಯಾಗಿ ಓಡಾಡುವವರನ್ನುದರೋಡೆಮಾಡುತ್ತಿದ್ದ ಪ್ರಕರಣಸಂಬಂಧ 6 ಮಂದಿ ದರೋಡೆಕೋರರನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೊಡಿಗೇಹಳ್ಳಿಯ ಸುನಿಲ್(23), ರವಿ(23), ತೇಜು(25), ಅಪ್ಪಿ(24), ಮಾರುತಿ(24), ಸತೀಶ್(23) ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.
ಜು.24 ರಂದು ರಾತ್ರಿ ಕೊಡಿಗೇನಹಳ್ಳಿ ತಿಂಡ್ಲು ಮುಖ್ಯರಸ್ತೆಯಲ್ಲಿ ಗಿರೀಶ್ ಎಂಬುವರನ್ನು ಅಡ್ಡಗಟ್ಟಿ ನಗದು, 2 ಮೊಬೈಲ್‌ಗಳನ್ನು ಸುಲಿಗೆ ಮಾಡಿ ಪರಾರಿಯಾಗಿದ್ದರು. ಆರೋಪಿಗಳ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಆರೋಪಿಗಳನ್ನು ಬಂಧಿಸಿ, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಂಡಿದ್ದಾರೆ. ಬಂಧಿತರಿಂದ 1 ಆಟೊ, 2 ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.







