ಜಾಗತಿಕ ಬಂಟ ಪ್ರತಿಷ್ಠಾನದ ಯಕ್ಷ ಪ್ರಶಸ್ತಿಗೆ ಉಬರಡ್ಕ ಉಮೇಶ ಶೆಟ್ಟಿ ಆಯ್ಕೆ

ಮಂಗಳೂರು, ಆ.29: ಜಾಗತಿಕ ಬಂಟ ಪ್ರತಿಷ್ಠಾನವು ಹಿರಿಯ ಯಕ್ಷಗಾನ ಕಲಾವಿದರಿಗೆ ನೀಡುವ ಡಾ.ಡಿ.ಕೆ. ಚೌಟ ದತ್ತಿನಿಧಿ ಪ್ರಶಸ್ತಿಗೆ ವೇಷಧಾರಿ ಉಬರಡ್ಕ ಉಮೇಶ ಶೆಟ್ಟಿ ಆಯ್ಕೆಯಾಗಿದ್ದಾರೆ. ಸತತ 44 ವರ್ಷ ಶ್ರೀಧರ್ಮಸ್ಥಳ ಮೇಳದಲ್ಲಿ ತಿರುಗಾಟ ಮಾಡಿದ ಇವರನ್ನು ಜಾನಪದ ಮತ್ತು ಯಕ್ಷಗಾನ ಅಕಾಡಮಿಯ ಮಾಜಿ ಸದಸ್ಯ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ, ಬಯಲಾಟ ಅಕಾಡಮಿಯ ಸದಸ್ಯ ಪಳ್ಳಿ ಕಿಶನ್ ಹೆಗ್ಡೆ ಹಾಗೂ ಹಿರಿಯ ಕಲಾಪೋಷಕ ಪ್ರೊ.ಜಿ.ಆರ್.ರೈ ಅವರನ್ನೊಳಗೊಂಡ ಆಯ್ಕೆ ಸಮಿತಿಯು ಆಯ್ಕೆ ಮಾಡಿದೆ.
ಸೆ.3ರಂದು ನಗರದ ಮೋತಿಮಹಲ್ ಸಭಾಂಗಣದಲ್ಲಿ ಬಿ.ಸಚ್ಚಿದಾನಂದ ಶೆಟ್ಟಿಯ ಅಧ್ಯಕ್ಷತೆಯಲ್ಲಿ ಜರಗುವ ಜಾಗತಿಕ ಬಂಟ ಪ್ರತಿಷ್ಠಾನದ ಮಹಾಸಭೆಯಲ್ಲಿ ನಗದು ಪುರಸ್ಕಾರದೊಂದಿಗೆ ಪ್ರಶಸ್ತಿ ನೀಡಲಾಗುವುದು ಎಂದು ಟ್ರಸ್ಟ್ ಕಾರ್ಯದರ್ಶಿ ಕೆ.ಎಂ.ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





