ಸಾಗರ: ಉಚಿತ ಆರೋಗ್ಯ ತಪಾಸಣೆ ಶಿಬಿರ
.jpg)
ಸಾಗರ, ಆ.30: ಗಣಪತಿ ಉತ್ಸವ ಸಂದರ್ಭದಲ್ಲಿ ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಸ್ವಾಗತಾರ್ಹ. ಇಂತಹ ಕಾರ್ಯಕ್ರಮಗಳಿಗೆ ಆರೋಗ್ಯ ಇಲಾಖೆ ಎಲ್ಲ ರೀತಿಯ ಸಹಕಾರ ನೀಡುತ್ತದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಕೆ.ಪಿ.ಅಚ್ಚುತ್ ಹೇಳಿದರು.
ಇಲ್ಲಿನ ನೆಹರೂ ನಗರ ಯುವಜನ ಸೇವಾ ಸಮಿತಿ ವತಿಯಿಂದ 20ನೆ ಗಣೇಶೋತ್ಸವ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಪ್ರಸಾದ್ ನೇತ್ರಾಲಯ, ಉಡುಪಿ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಉಚಿತ ನೇತ್ರ ತಪಾಸಣೆ, ಶಸ್ತ್ರಚಿಕಿತ್ಸೆ, ಮಧುಮೇಹ ಕಣ್ಣಿನ ತಪಾಸಣೆ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಮನುಷ್ಯನಿಗೆ ಕಣ್ಣು ತುಂಬ ಪ್ರಮುಖವಾದ ಅಂಗ. ಅದನ್ನು ಸಂರಕ್ಷಿಸಿಕೊಳ್ಳುವುದು ಎಲ್ಲರ ಕರ್ತವ್ಯ. ಇತ್ತೀಚಿನ ದಿನಗಳಲ್ಲಿ ನಾವು ಒತ್ತಡದ ನಡುವೆ ಬದುಕುತ್ತಿದ್ದು ಆರೋಗ್ಯದ ಬಗ್ಗೆ ಗಮನ ಹರಿಸುತ್ತಿಲ್ಲ. ಕಣ್ಣಿನ ಶಸ್ತ್ರಚಿಕಿತ್ಸೆ ಖಾಸಗಿ ಆಸ್ಪತ್ರೆಯಲ್ಲಿ ಅತ್ಯಂತ ದುಬಾರಿಯಾಗುತ್ತದೆ. ಇಲ್ಲಿ ಉಚಿತವಾಗಿ ಅನೇಕ ರೀತಿಯ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಸ್ವಯಂಪ್ರೇರಣೆಯಿಂದ ಬಂದಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಯುವಜನ ಸೇವಾ ಸಮಿತಿ ಉಪಾಧ್ಯಕ್ಷ ಪುಟ್ಟಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಪ್ರಸಾದ್ ನೇತ್ರಾಲಯದ ಡಾ. ಪ್ರಮೋದ್ ಶೆಟ್ಟಿ, ಉಪವಿಭಾಗೀಯ ಆಸ್ಪತ್ರೆಯ ನಿರಂಜನ್, ರಾಘವೇಂದ್ರ ಉಪಸ್ಥಿತರಿದ್ದರು. ಸತೀಶ್ ಆರ್. ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು.







