ಅನುಷ್ಕಾ ಶರ್ಮಾ ನಟನೆಯ ಚಿತ್ರದ ಶೂಟಿಂಗ್ ಸಂದರ್ಭ ಅವಘಡ: ಓರ್ವ ಮೃತ್ಯು

ಕೊಲ್ಕತ್ತಾ, ಆ.30: ನಟಿ ಅನುಷ್ಕಾ ಶರ್ಮಾ ಮುಖ್ಯಭೂಮಿಕೆಯ ‘ಪರಿ’ ಚಿತ್ರದ ಚಿತ್ರೀಕರಣದ ಸಂದರ್ಭ ತಂತ್ರಜ್ಞರೊಬ್ಬರು ವಿದ್ಯುತ್ ಆಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
“ನಾವು ಈ ಬಗ್ಗೆ ಪರಿಶೀಲಿಸುತ್ತಿದ್ದೇವೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ವರದಿಗಾಗಿ ಕಾಯುತ್ತಿದ್ದೇವೆ. ವಿದ್ಯುತ್ ಆಘಾತದಿಂದ ಅವರು ಮೃತಪಟ್ಟಿರುವುದಾಗಿ ಶಂಕಿಸಲಾಗಿದೆ” ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಉತ್ತರ ಪ್ರದೇಶದ ಶಾ ಆಲಂ(28) ಮೃತಪಟ್ಟ ತಂತ್ರಜ್ಞ ಎಂದು ಗುರುತಿಸಲಾಗಿದೆ. ಚಿತ್ರೀಕರಣದ ಜಾಗದಲ್ಲಿ ಚಿತ್ರೀಕರಣ ಮುಗಿದ ನಂತರ ಪೊದೆಯ ಸಮೀಪ ಇದ್ದ ವಯರನ್ನು ಮುಟ್ಟಿದ ಪರಿಣಾಮ ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.
Next Story





