Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರಕಾರ ಸರಿಯಾದ್ದನ್ನೇ ಮಾಡಿದೆ,ನನ್ನ ...

ಸರಕಾರ ಸರಿಯಾದ್ದನ್ನೇ ಮಾಡಿದೆ,ನನ್ನ ರಾಜೀನಾಮೆಯ ಪ್ರಶ್ನೆಯೇ ಇಲ್ಲ: ಖಟ್ಟರ್

ವಾರ್ತಾಭಾರತಿವಾರ್ತಾಭಾರತಿ30 Aug 2017 7:04 PM IST
share
ಸರಕಾರ ಸರಿಯಾದ್ದನ್ನೇ ಮಾಡಿದೆ,ನನ್ನ  ರಾಜೀನಾಮೆಯ ಪ್ರಶ್ನೆಯೇ ಇಲ್ಲ: ಖಟ್ಟರ್

ಹೊಸದಿಲ್ಲಿ,ಆ.30: ತನ್ನ ರಾಜೀನಾಮೆಗೆ ಬೇಡಿಕೆಗಳನ್ನು ಬುಧವಾರ ಇಲ್ಲಿ ತಿರಸ್ಕರಿಸಿದ ಹರ್ಯಾಣ ಮುಖ್ಯಮಂತ್ರಿ ಮನೋಹರಲಾಲ ಖಟ್ಟರ್ ಅವರು, ತನ್ನ ಸರಕಾರವು ‘ಸಂಯಮ’ದಿಂದ ಕಾರ್ಯ ನಿರ್ವಹಿಸಿದೆ ಮತ್ತು ಅದರ ಕೆಲಸ ತನಗೆ ತೃಪ್ತಿಯನ್ನುಂಟು ಮಾಡಿದೆ ಎಂದು ಹೇಳಿದರು.

ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿಯಾಗಿ ಹರ್ಯಾಣದಲ್ಲಿ ಇತ್ತೀಚಿಗೆ ನಡೆದಿದ್ದ ಡೇರಾ ಹಿಂಸಾಚಾರ ಕುರಿತು ವರದಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯ ಸರಕಾರವು ಡೇರಾ ಪ್ರಕರಣವನ್ನು ನಿರ್ವಹಿಸಲು ವಿಫಲಗೊಂಡಿದೆ ಮತ್ತು ತನ್ಮೂಲಕ ವ್ಯಾಪಕ ಹಿಂಸಾಚಾರಕ್ಕೆ ಕಾರಣವಾಗಿದೆ ಎಂಬ ಪ್ರತಿಪಕ್ಷಗಳ ಆರೋಪಗಳ ನಡುವೆಯೇ ಬಿಜೆಪಿಯ ಉನ್ನತ ನಾಯಕತ್ವವು ತನ್ನನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬಹುದು ಎಂಬ ವದಂತಿಗಳ ಕುರಿತು ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸುತ್ತಿದ್ದರು.

ಕಳೆದ ಶುಕ್ರವಾರ ಡೇರಾ ಸಚ್ಚಾ ಸೌದಾದ ಮುಖ್ಯಸ್ಥ ಬಾಬಾ ಗುರ್ಮೀತ್ ಸಿಂಗ್‌ನನ್ನು ಅತ್ಯಾಚಾರ ಪ್ರಕರಣಗಳಲ್ಲಿ ಅಪರಾಧಿಯೆಂದು ಪಂಚಕುಲಾದ ವಿಶೇಷ ಸಿಬಿಐ ನ್ಯಾಯಾಲಯವು ಘೋಷಿಸಿದ ಬಳಿಕ ಡೇರಾ ಬೆಂಂಬಲಿಗರು ಹಿಂಸೆಗಿಳಿದಿದ್ದು, ಕನಿಷ್ಠ 38 ಜನರು ಬಲಿಯಾಗಿದ್ದರು. ಈ ಪೈಕಿ ಹೆಚ್ಚಿನವರು ಪೊಲೀಸ್ ಗೋಲಿಬಾರ್‌ನಲ್ಲಿ ಜೀವ ಕಳೆದುಕೊಂಡಿದ್ದರು.

ಗುರ್ಮೀತ್ ನ್ಯಾಯಾಲಯದ ಎದುರು ಹಾಜರಾಗುವ ಮುನ್ನ ಏನಾದರೂ ಸಂಭವಿಸಿದ್ದರೆ ಆತ ನ್ಯಾಯಾಲಯಕ್ಕೆ ಹಾಜರಾಗದಿರಲು ಅದನ್ನೇ ನೆಪವನ್ನಾಗಿಟ್ಟು ಕೊಳ್ಳುತ್ತಿದ್ದ. ಆತ ಪಂಚಕುಲಾದ ನ್ಯಾಯಾಲಯದಲ್ಲಿ ಹಾಜರಾಗುವಂತೆ ನೋಡಿಕೊಳ್ಳಲು ತನ್ನ ಸರಕಾರವು ಸಂಯಮದಿಂದ ಕಾರ್ಯ ನಿರ್ವಹಿಸಿತ್ತು ಮತ್ತು ಅದು ತನ್ನ ಗುರಿಯನ್ನು ಸಾಧಿಸಿದೆ ಎಂದು ಖಟ್ಟರ್ ಹೇಳಿದರು.

ತನ್ನ ರಾಜೀನಾಮೆಗೆ ಒತ್ತಾಯಗಳ ಕುರಿತ ಪ್ರಶ್ನೆಗೆ ಅವರು, ಯಾರೂ ಏನು ಬೇಕಾದರೂ ಹೇಳಬಹುದು. ನಮ್ಮ ಕೆಲಸ ನಮಗೆ ತೃಪ್ತಿ ನೀಡಿದೆ. ನಾವು ಮಾಡಿದ್ದು ಸರಿಯಾಗಿಯೇ ಇದೆ ಎಂದು ಉತ್ತರಿಸಿದರು.

 ರಾಜಕೀಯ ಬೆಂಬಲಕ್ಕಾಗಿ ಡೇರಾ ಮುಖ್ಯಸ್ಥನೊಡನೆ ತನ್ನ ಪಕ್ಷದ ಒಡನಾಟದ ಕುರಿತು ಪ್ರಶ್ನೆಗೆ ಅವರು, ರಾಜಕೀಯ ಪಕ್ಷಗಳು ಪ್ರತಿಯೊಬ್ಬರ ಸಹಕಾರವನ್ನು ಕೋರುತ್ತವೆ. ಆದರೆ ಇಂತಹ ಬೆಂಬಲಕ್ಕಾಗಿ ಯಾರಾದರೂ ಕಾನೂನು ಉಲ್ಲಂಘಿಸು ವುದನ್ನು ಸಹಿಸಲು ಸಾಧ್ಯವಿಲ್ಲ. ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಉತ್ತರಿಸಿದರು. ಪ್ರತಿಪಕ್ಷಗಳು ಆರೋಪಿಸಿರುವಂತೆ ತನ್ನ ಸರಕಾರವು ಡೇರಾ ಮುಖ್ಯಸ್ಥ ನೊಡನೆ ಯಾವುದೇ ವ್ಯವಹಾರ ಹೊಂದಿರಲಿಲ್ಲ ಎಂದು ಅವರು ಪ್ರತಿಪಾದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X