Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಚನ ಸಂಸ್ಕೃತಿ ಉಳಿವಿಗೆ ಲಿಂಗಾಯತ...

ವಚನ ಸಂಸ್ಕೃತಿ ಉಳಿವಿಗೆ ಲಿಂಗಾಯತ ಧರ್ಮಕ್ಕೆ ಮಾನ್ಯತೆ ಅಗತ್ಯ: ಸಿದ್ದರಾಮೇಶ್ವರ ಸ್ವಾಮೀಜಿ

ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಸ್ಥಾನಕ್ಕೆ ಒತ್ತಾಯಿಸಿ ನಿರ್ಣಾಯಕ ಸಭೆ

ವಾರ್ತಾಭಾರತಿವಾರ್ತಾಭಾರತಿ30 Aug 2017 7:28 PM IST
share
ವಚನ ಸಂಸ್ಕೃತಿ ಉಳಿವಿಗೆ ಲಿಂಗಾಯತ ಧರ್ಮಕ್ಕೆ ಮಾನ್ಯತೆ ಅಗತ್ಯ: ಸಿದ್ದರಾಮೇಶ್ವರ ಸ್ವಾಮೀಜಿ

ಬೆಂಗಳೂರು, ಆ.30: ಜಾತಿ, ಲಿಂಗ, ಭಾಷೆಯ ಭೇದ ಭಾವ ಮಾಡದೆ ಜಗತ್ತಿಗೆ ಸಮಾನತೆಯ ಸಾರವನ್ನು ಬೋಧಿಸುವ ವಚನಗಳ ಸಂಸ್ಕೃತಿ ಉಳಿಯಬೇಕಾದರೆ ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಸ್ಥಾನಮಾನ ಅಗತ್ಯವೆಂದು ರುದ್ರಾಕ್ಷಿ ಮಠದ ಸಿದ್ದರಾಮೇಶ್ವರ ಸ್ವಾಮೀಜಿ ಒತ್ತಾಯಿಸಿದ್ದಾರೆ.

ಬುಧವಾರ ಜನ ಸಾಮಾನ್ಯರ ವೇದಿಕೆ ನಗರದ ಬಸವ ಭವನದಲ್ಲಿ ಲಿಂಗಾಯತ ಧರ್ಮ-ಸ್ವತಂತ್ರ ಧರ್ಮ ನಿರ್ಣಾಯಕ ಸಭೆಯಲ್ಲಿ ಮಾತನಾಡಿದ ಅವರು, ವೈದಿಕ ಧರ್ಮದ ಶ್ರೇಣೀಕರಣ ವ್ಯವಸ್ಥೆಯಿಂದ ನಲುಗಿದ್ದ ಜನತೆಗೆ ಬಸವಣ್ಣ ಲಿಂಗಾಯತ ಧರ್ಮವನ್ನು ಸ್ಥಾಪಿಸುವ ಮೂಲಕ ಸಮಾನತೆ, ವೈಜ್ಞಾನಿಕ ಚಿಂತನೆ ಮೂಡಿಸಿದರು. ಹೀಗಾಗಿ ಲಿಂಗಾಯತ ಧರ್ಮವನ್ನು ವಿಶ್ವವ್ಯಾಪಿಗೊಳಿಸಬೇಕಾದರೆ ಸಾಂವಿಧಾನಿಕ ಸ್ಥಾನಮಾನ ಅಗತ್ಯವೆಂದು ತಿಳಿಸಿದರು.

ಲಿಂಗಾಯತ ಧರ್ಮವು ದಕ್ಷಿಣ ಭಾರತದ ಮೊಟ್ಟ ಮೊದಲ ಧರ್ಮವಾಗಿದೆ. ಆದರೆ, ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಅದರ ವಿಚಾರಗಳನ್ನು ಜಗತ್ತಿಗೆ ತಲುಪದಂತೆ ಇಲ್ಲಿಯವರೆಗೆ ತಡೆಯಲಾಗಿತ್ತು. ಆದರೆ, ಜನತೆ ವಿದ್ಯಾವಂತರಾದಂತೆ ವಚನಗಳ ನಿಜವಾದ ಸಾರ ಏನೆಂದು ಅರ್ಥವಾಗಿದೆ. ಹೀಗಾಗಿ ಜಾಗೃತಗೊಂಡ ಸಾಮಾನ್ಯ ಜನತೆ ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಸ್ಥಾನಮಾನಕ್ಕೆ ಒತ್ತಾಯಿಸುತ್ತಿದ್ದಾರೆ ಎಂದು ಹೇಳಿದರು.

ವೈದಿಕ ಧರ್ಮದ ಪ್ರಮುಖರ ಅಂಗವಾಗಿರುವ ವೀರಶೈವರು ಲಿಂಗಾಯತ ಧರ್ಮದ ಸಾರವನ್ನು ತಿರುಚಲು ಪ್ರಯತ್ನಿಸುತ್ತಿದ್ದಾರೆ. ಲಿಂಗಾಯತ ಧರ್ಮ ಹಾಗೂ ವೀರಶೈವಕ್ಕೂ ಸಾಕಷ್ಟು ವ್ಯತ್ಯಾಸಗಳಿವೆ. ಅದರ ಅರಿವಿದ್ದೇ ವೀರಶೈವ ಮಠಾಧೀಶರು ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡದಂತೆ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಅವರು ಟೀಕಿಸಿದರು.

ಬೇಲಿಮಠದ ಶಿವರುದ್ರ ಮಹಾಸ್ವಾಮೀಜಿ ಮಾತನಾಡಿ, ವೀರಶೈವದಲ್ಲಿ ಜಾತಿ ಆಧಾರದ ಮೇಲೆ ಲಿಂಗವನ್ನು ವಿಂಗಡನೆ ಮಾಡಿದರು. ಬ್ರಾಹ್ಮಣರಿಗೆ ಸ್ಫಟಿಕ, ಕ್ಷತ್ರಿಯರಿಗೆ ಬಂಗಾರ, ಶೂದ್ರರಿಗೆ ಮಣ್ಣಿನ ಲಿಂಗ ಕೊಟ್ಟ ಅವಿವೇಕದ ಪರಮಾವಧಿಯನ್ನು ಹೇಳಿಕೊಟ್ಟಿದೆ. ಆದರೆ, ಅಪ್ಪ ಬಸವಣ್ಣ ಕಾಯಕ ಹಾಗೂ ಬದುಕಿನಲ್ಲಿಯೇ ಶಿವಲಿಂಗವನ್ನು ಕಂಡುಕೊಳ್ಳಬೇಕೆಂದು ಕರೆ ನೀಡಿದ್ದರು ಎಂದರು.

ಕೆಲವರು ಉದ್ದೇಶ ಪೂರ್ವಕವಾಗಿಯೇ ಬಸವಣ್ಣನವರ ಬೆಳಕನ್ನು ಹಾಳು ಮಾಡಬೇಕೆಂದು ಸಾಕಷ್ಟು ಪುಸ್ತಕ ಬರೆದಿದ್ದಾರೆ. ಆದರೆ, ಬಸವಣ್ಣ ಬೆಳಕು ಕಡಿಮೆಯಾಗಿಲ್ಲ. ಈಗ ನಮಗೆಲ್ಲಾ ಬಸವಣ್ಣ ವಿರೋಧಿ ಅಂತಾ ಹಣೆಪಟ್ಟಿ ಕಟ್ಟುತ್ತಿದ್ದಾರೆ. ಆದರೆ, ಮನುವಾದಿಗಳ ಕೈಗೊಂಬೆಗಳಾಗಿರುವ ಪಟ್ಟಭದ್ರ ವೀರಶೈವ ಮುಖಂಡರ ಷಡ್ಯಂತ್ರಗಳು ಜನತೆಗೆ ತಿಳಿಸಿದಿದೆ. ಹೀಗಾಗಿ ಯಾರು ಬಸವಣ್ಣನ ನಿಜವಾದ ಅನುಯಾಯಿಗಳು ಯಾರೆಂದು ಮುಂದಿನ ದಿನಗಳಲ್ಲಿ ತಿಳಿದು ಬರಲಿದೆ ಎಂದರು.

ಪ್ರಗತಿಪರ ಹೋರಾಟಗಾರ, ನಟ ಚೇತನ್ ಮಾತನಾಡಿ, ರಾಜ್ಯದಲ್ಲಿ 12ನೆ ಶತಮಾನ ಶರಣ ನಾಡಾಗಿತ್ತು. ಆದರೆ, 21ನೆ ಶತಮಾನದಲ್ಲಿ ಪುರೋಹಿತರ ನಾಡಾಗಿ ಪರಿವರ್ತನೆಯಾಗಿದೆ. ಈ ಬೆಳವಣಿಗೆ ರಾಜ್ಯಕ್ಕೆ, ದೇಶಕ್ಕೆ ಒಳ್ಳೆಯದಲ್ಲ. ಹೀಗಾಗಿ ಪುನಃ ಶರಣರ ತತ್ವಕ್ಕೆ ನಾವೆಲ್ಲರು ಹೋಗಬೇಕಾಗಿದೆ ಎಂದು  ಹೇಳಿದರು.

ಕಾರ್ಯಕ್ರಮದಲ್ಲಿ ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ, ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ, ಬಸವಜ್ಞಾನ ಮಂದಿರ ಪೀಠಾಧ್ಯಕ್ಷೆ ಶರಣೆ ಮಹಾಲಿಂಗ, ಬಿಎಸ್ಪಿ ರಾಜ್ಯಾಧ್ಯಕ್ಷ ಎನ್.ಮಹೇಶ್, ವಕೀಲ ಅನಂತ್‌ನಾಯಕ್ ಮತ್ತಿತರರಿದ್ದರು.


ಇವತ್ತು ರಾಜ್ಯದಲ್ಲಿ ಲಿಂಗಾಯತ ಧರ್ಮವನ್ನು ಎಲ್ಲ ರಾಜಕೀಯ ಪಕ್ಷಗಳು ಸ್ವಾರ್ಥಕ್ಕೆ ಬಳಸಿಕೊಳ್ಳಲಾಗುತ್ತಿವೆ. ತಾನು ಲಿಂಗಾಯತ ಧರ್ಮದವನೆಂದು ಹೇಳಿಕೊಳ್ಳುವ ಬಿ.ಎಸ್.ಯಡಿಯೂರಪ್ಪ ವೈದಿಕ ಧರ್ಮದ ಅಪ್ಪಟ ಆರಾಧಕರಾಗಿದ್ದಾರೆ. ಇಂತವರಿಂದ ಲಿಂಗಾಯತ ಧರ್ಮದ ನಿಜವಾದ ಆಶಯಗಳನ್ನು ನಿರೀಕ್ಷಿಸಲು ಸಾಧ್ಯವೇ.
-ಚೇತನ್, ಚಿತ್ರನಟ, ಪ್ರಗತಿಪರ ಹೋರಾಟಗಾರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X