Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಲೆಕ್ಕಪರಿಶೋಧನೆಯ ಸವಾಲುಗಳು ಎದುರಿಸಲು...

ಲೆಕ್ಕಪರಿಶೋಧನೆಯ ಸವಾಲುಗಳು ಎದುರಿಸಲು ಸಿದ್ಧ: ಶಶಿಕಾಂತ್ ಶರ್ಮ

ವಾರ್ತಾಭಾರತಿವಾರ್ತಾಭಾರತಿ30 Aug 2017 9:13 PM IST
share

ಬೆಂಗಳೂರು, ಆ.30: ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕ ಪರಿಶೋಧಕರ(ಸಿಎಜಿ) ಗಣಕೀಕೃತ ರಾಜಸ್ವ ಲೆಕ್ಕಪರಿಶೋಧನಾ ಶ್ರೇಷ್ಠತೆಯ ಕೇಂದ್ರವು (ಸದಾರ್) ರಾಜಸ್ವ ಲೆಕ್ಕಪರಿಶೋಧನೆಯ ಕ್ಷೇತ್ರದಲ್ಲಿ ಇಲಾಖೆಯನ್ನು ಗಣಕ ಯುಗಕ್ಕೆ ಕೊಂಡೊಯ್ಯುವಲ್ಲಿ ಪ್ರಧಾನ ಪಾತ್ರ ನಿರ್ವಹಿಸಲಿದೆ ಎಂದು ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕ ಶಶಿಕಾಂತ್ ಶರ್ಮ ತಿಳಿಸಿದ್ದಾರೆ.

ಬುಧವಾರ ನಗರದಲ್ಲಿ ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾ ಲೆಕ್ಕಪರಿಶೋಧಕರ ಕಚೇರಿಯ ನೂತನ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಉದ್ದೇಶಿತ ಕ್ರಮವು, ಸರಕಾರಿ ಲೆಕ್ಕಪರಿಶೋಧನೆಯಲ್ಲಿ ಗಣಕೀಕೃತ ಲೆಕ್ಕಪರಿಶೋಧನೆಯನ್ನು ಕೈಗೊಳ್ಳುವಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಂಚೂಣಿಯತ್ತ ಕೊಂಡೊಯ್ಯುವುದು ಎಂದು ಅಭಿಪ್ರಾಯಪಟ್ಟರು.

ಹಲವಾರು ದತ್ತ ಮೂಲಗಳನ್ನು ಕ್ರೋಢೀಕರಿಸುವ ಒಂದು ಕೇಂದ್ರೀಯ ದತ್ತ ಭಂಡಾರದ ಸಂಗ್ರಹಣೆಯ ಉದ್ದೇಶದೊಂದಿಗೆ ಹೊಸ ವಿಧಿ ವಿಧಾನಗಳನ್ನು ನಿರೂಪಿಸಲು ಮತ್ತು ವಿವಿಧ ದತ್ತ ಮೂಲಗಳ ವಿಶ್ಲೇಷಣೆಗೆ ನಿರ್ದಿಷ್ಟ ಮಾದರಿಗಳನ್ನು ಅಭಿವೃದ್ಧಿಪಡಿಸಲು ಸ್ಥಾಪನೆ ಮಾಲಾಗಿದೆ ಎಂದು ಹೇಳಿದರು.

ಒಂದು ಗಣಕೀಕೃತ ಪರಿಸರದಲ್ಲಿ ರಾಜಸ್ವ ಲೆಕ್ಕ ಪರಿಶೋಧನೆಯಲ್ಲಿ ಪ್ರವೀಣತೆಯನ್ನು ಅಭಿವೃದ್ಧಿಪಡಿಸುವ ಉದ್ದೇಶವನ್ನು ಅದು ಹೊಂದಿದೆ. ಕೇಂದ್ರವು ಶೀಘ್ರವಾಗಿ ಒದಲಾಗುತ್ತಿರುವ ರಾಜಸ್ವ ನಿರ್ಧಾರಣೆ ಮತ್ತು ಸಂಗ್ರಹಣೆಯ ಪರಿಸ್ಥಿತಿಯಲ್ಲಿ, ರಾಜಸ್ವ ಲೆಕ್ಕಪರಿಶೋಧನೆಯಲ್ಲಿ ಹೊರಬರುತ್ತಿರುವ ಕ್ಷೇತ್ರಗಳಲ್ಲಿ ಮಾಹಿತಿ ಹಂಚಿಕೊಳ್ಳುವಿಕೆ, ಕುಶಲತೆಯ ಅಭಿವೃದ್ಧಿ ಮತ್ತು ಸಂಶೋಧನೆಗೆ ಕೇಂದ್ರವು ಸಹಾಯ ಮಾಡುವುದು ಎಂದು ತಿಳಿಸಿದರು.

ಮೊದಲ ಹಂತವಾಗಿ, ಮುಂದಿನ ಎಂಟು ತಿಂಗಳಲ್ಲಿ, ಕೇಂದ್ರೀಯ ಪ್ರತ್ಯಕ್ಷ ಮತ್ತು ಅಪ್ರತ್ಯಕ್ಷ ತೆರಿಗೆಗಳಿಗೆ ಸಂಬಂಧಿಸಿದಂತೆ ಎಲ್ಲ ರಾಜಸ್ವ ದತ್ತಾಂಶಗಳ ಸಂಗ್ರಹಣೆ, ತಾಳೆ ನೋಡುವಿಕೆ ಮತ್ತು ವಿಶ್ಲೇಷಣೆಗಾಗಿ ಒಂದು ದತ್ತಾಂಶ ಭಂಡಾರವನ್ನು ಸೆಡಾರ್ ಸ್ಥಾಪಿಸುವುದು. ಈ ಹಂತದಲ್ಲಿ ಶಾಸಕಾಂಗದಲ್ಲಿ ಮಂಡಿಸಲಾಗುವ ಗಣಕೀಕೃತ ಲೆಕ್ಕಪರಿಶೋಧನಾ ವರದಿಗಳಿಗಾಗಿ ಪರೀಕ್ಷಾ ಮಾದರಿಗಳನ್ನು ಮತ್ತು ತಾಂತ್ರಿಕತೆಯನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ ಎಂದರು.

ಸಮಾರಂಭದಲ್ಲಿ ಸರಕು ಮತ್ತು ಸೇವಾ ತೆರಿಗೆಗಳ (ಜಿಎಸ್‌ಟಿ) ಮೇಲೆ ಇ-ಸಂಹಿತೆಯನ್ನು ಬಿಡುಗಡೆಗೊಳಿಸಲಾಯಿತು. ಸಿಎಜಿರವರ ಕೇಂದ್ರೀಯ ರಾಜಸ್ವ ಲೆಕ್ಕಪರಿಶೋಧನಾ ವಿಭಾಗವು ಗಣಕೀಕೃತ ಲೆಕ್ಕಪರಿಶೋಧನಾ ವರದಿಯ ಒಂದು ಪರೀಕ್ಷಾ ಮಾದರಿಯನ್ನು ಮತ್ತು ಲೆಕ್ಕ ಪರಿಶೋಧನಾ ಯೋಜನೆಗಾಗಿ ಸೀಮಾ ಸುಂಕಕ್ಕೆ ಸಂಬಂಧಿಸಿದ ದತ್ತಾಂಶಗಳ ನಿಯಂತ್ರಣ ಸಾಧನಗಳನ್ನು ಹಾಗೂ ಸರಕು ಮತ್ತು ಸೇವಾ ತೆರಿಗೆಗಳ ಬಗ್ಗೆ ವಿದ್ಯುನ್ಮಾನ ಸ್ವ-ನಿರ್ಧಾರಣೆಯ ಸಾಧನವನ್ನು ಪ್ರದರ್ಶಿಸಿದರು.

ಇದು ಗಣಕೀಕೃತ ರಾಜಸ್ವ ಲೆಕ್ಕಪರಿಶೋಧನೆಯಲ್ಲಿ ಇಲಾಖೆಯ ಉದ್ದೇಶ ಮತ್ತು ಸಾಮರ್ಥ್ಯವನ್ನು ಪ್ರದರ್ಶಿಸಿದ್ದು, ಲೆಕ್ಕಪರಿಶೋಧನೆಯನ್ನು ನಿರ್ವಹಿಸುವಲ್ಲಿ ಹೆಚ್ಚಿನ ದಕ್ಷತೆ, ಪಾರದರ್ಶಕತೆ ಮತ್ತು ವಿಶ್ವಾಸದತ್ತ ಕೊಂಡೊಯ್ಯುವುದು ಎಂದು ಅವರು ವ್ಯಾಖ್ಯಿನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X