Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಳೆಗಾರರು ತೋಟ ನಿರ್ವಹಣೆಗೆ ಹೆಚ್ಚು...

ಬೆಳೆಗಾರರು ತೋಟ ನಿರ್ವಹಣೆಗೆ ಹೆಚ್ಚು ಮುತುವರ್ಜಿ ವಹಿಸಬೇಕು: ಡಾ. ಎಚ್.ನಾರಾಯಣಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ31 Aug 2017 4:53 PM IST
share
ಬೆಳೆಗಾರರು ತೋಟ ನಿರ್ವಹಣೆಗೆ ಹೆಚ್ಚು ಮುತುವರ್ಜಿ ವಹಿಸಬೇಕು: ಡಾ. ಎಚ್.ನಾರಾಯಣಸ್ವಾಮಿ

ಸಾಗರ, ಆ.31: ಮಳೆ ಬಿಸಿಲು ವಾತಾವರಣದಿಂದ ಅಡಿಕೆ ತೋಟಗಳಿಗೆ ಬೇರೆ ಬೇರೆ ರೀತಿಯ ರೋಗಗಳು ಬರುವ ಸಾಧ್ಯತೆ ಇರುವುದರಿಂದ ಬೆಳೆಗಾರರು ತೋಟ ನಿರ್ವಹಣೆಗೆ ಹೆಚ್ಚು ಮುತುವರ್ಜಿ ವಹಿಸಬೇಕು ಎಂದು ಶಿವಮೊಗ್ಗ ಅಡಿಕೆ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ. ಎಚ್.ನಾರಾಯಣಸ್ವಾಮಿ ತಿಳಿಸಿದರು. 

ತಾಲೂಕಿನ ತಾಳಗುಪ್ಪ ಹೋಬಳಿಯ ಹಂಸಗಾರು, ಮರಡುಮನೆ, ಸಸರವಳ್ಳಿ ಸೇರಿದಂತೆ ವಿವಿಧ ಅಡಿಕೆ ತೋಟಗಳಿಗೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿ, ಹೊಸಹಳ್ಳಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ತಾಲೂಕಿನ ಹಂಸಗಾರು ಹಾಗೂ ಹೊಸಹಳ್ಳಿ ಭಾಗದಲ್ಲಿ ಅಡಿಕೆಗೆ ಎಲೆಚುಕ್ಕಿ ರೋಗ ಬಂದು, ಸೋಗೆಗಳು ಹಳದಿಯಾಗುತ್ತಿರುವುದು ಪತ್ತೆಯಾಗಿದೆ ಎಂದು ಹೇಳಿದರು. 

ಎಲೆಚುಕ್ಕಿ ರೋಗದಿಂದ ಮರಗಳ ಆಹಾರ ಉತ್ಪಾದನೆ ಸಾಮರ್ಥ್ಯ ಕಡಿಮೆಯಾಗುತ್ತದೆ. ಅಡಿಕೆ ಮರಗಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಸುಮಾರು ಶೇ. 40ರಷ್ಟು ಬೆಳೆ ನಾಶವಾಗುವ ಸಾಧ್ಯತೆ ಇರುವುದರಿಂದ ಬೆಳೆಗಾರರು ತೋಟಗಳಲ್ಲಿ ಹಳದಿಯಾಗಿರುವ ಸೋಗೆಗಳನ್ನು ತೆಗೆದು ಸ್ವಚ್ಚಗೊಳಿಸಬೇಕು. ಎಲೆಗಳ ಆರೋಗ್ಯದ ಬಗ್ಗೆ ಹೆಚ್ಚು ಗಮನ ಕೊಡಬೇಕು. ರೋಗ ನಿಯಂತ್ರಣಕ್ಕಾಗಿ ಇರುವ ವೈಜ್ಞಾನಿಕ ವಿಧಾನವನ್ನು ಅನುಸರಿಸಬೇಕು ಎಂದು ತಿಳಿಸಿದರು. 

ಮಳೆಬಿಸಿಲು ಇರುವುದರಿಂದ ತೋಟಗಳಿಗೆ ಕೊಳೆರೋಗ ಜಾಸ್ತಿಯಾಗಿದೆ.  ಜೂನ್ ಮತ್ತು ಜುಲೈ ತಿಂಗಳಿನಲ್ಲಿ ಮಳೆ ಕೊರತೆಯಾಗಿದ್ದು, ಆಗಸ್ಟ್ ತಿಂಗಳಿನಲ್ಲಿ ಮಳೆ ಪ್ರಮಾಣ ಹೆಚ್ಚಿದೆ. ಮಳೆ ಜೊತೆಗೆ ವಿಪರೀತ ಬಿಸಿಲು ಬೀಳುತ್ತಿರುವುದರಿಂದ ತಾಲ್ಲೂಕಿನಾದ್ಯಂತ ಅನೇಕ ತೋಟಗಳಲ್ಲಿ ಕೊಳೆರೋಗ ಕಾಡುವ ಸಾಧ್ಯತೆ ಇದೆ. ಕಣಿವೆ ಪ್ರದೇಶದಲ್ಲಿ ಅಡಿಕೆ ತೋಟ ಮಾಡಿಕೊಂಡಿರುವ ಬೆಳೆಗಾರರು ಹೆಚ್ಚು ಜಾಗೃತೆಯಿಂದ ತೋಟ ನಿರ್ವಹಣೆ ಮಾಡಬೇಕು ಎಂದರು. 

ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ. ನಾಗರಾಜಪ್ಪ ಅಡಿವೆಪ್ಪರ್ ಮಾತನಾಡಿ, ಬೆಳೆಗಾರರು ಅಂತರ ಬೆಳೆಗಳಿಗೆ ಹೆಚ್ಚಿನ ಒತ್ತು ನೀಡಬೇಕು. ತೋಟಗಳಲ್ಲಿ ರೋಗಗ್ರಸ್ತ ಮೆಣಸಿನ ಬಳ್ಳಿಗಳನ್ನು ತೆಗೆದು ಹಾಕಬೇಕು. ಇದರ ಜೊತೆಗೆ ರೋಗಬಾಧೆಯಿಂದ ಉದುರಿರುವ ಕೋಕೋ ಕಾಯಿಗಳನ್ನು ತೆಗೆದು ಹಾಕಬೇಕು. ತೋಟಕ್ಕೆ ಗಾಳಿಬೆಳಕು ಬರುವಂತೆ ಸೂಕ್ತ ನಿಗಾವಹಿಸಬೇಕು ಎಂದು ಹೇಳಿದರು. 

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಹರ್ಷ, ಲಕ್ಷ್ಮೀನಾರಾಯಣ, ಸುಬ್ರಾವ್, ಶಂಕರನಾರಾಯಣ ಇನ್ನಿತರರು ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X