ಗುರ್ಮೀತ್ ಸಿಂಗ್ ಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಧೀಶರಿಗೆ ‘ಝಡ್ ಪ್ಲಸ್’ ಭದ್ರತೆ
ಬೆದರಿಕೆ ಕರೆಗಳ ಹಿನ್ನೆಲೆ

ಹೊಸದಿಲ್ಲಿ, ಆ.31: ಅತ್ಯಾಚಾರ ಪ್ರಕರಣದಲ್ಲಿ ಡೇರಾ ಸಚ್ಚಾ ಸೌಧಾದ ಮುಖ್ಯಸ್ಥ ಗುರ್ಮೀತ್ ಸಿಂಗ್ ಗೆ 20 ವರ್ಷಗಳ ಜೈಲುಶಿಕ್ಷೆ ವಿಧಿಸಿ ತೀರ್ಪು ನೀಡಿದ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಗ್ ದೀಪ್ ಸಿಂಗ್ ರಿಗೆ ‘ಝಡ್ ಪ್ಲಸ್’ ಭದ್ರತೆ ಒದಗಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಡೇರಾ ಮುಖ್ಯಸ್ಥ ಗುರ್ಮೀತ್ ಸಿಂಗ್ ಗೆ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ ನಂತರ ಜಗ್ ದೀಪ್ ಸಿಂಗ್ ಹಾಗು ಅವರ ಕುಟುಂಬ ಸದಸ್ಯರಿಗೆ ಅನೇಕ ಬೆದರಿಕೆಗಳು ಬಂದಿದ್ದು, ಆದ್ದರಿಂದ ಅವರಿಗೆ ಈ ಭದ್ರತೆ ಒದಗಿಸಲಾಗಿದೆ ಎಂದು ತಿಳಿದುಬಂದಿದೆ.
ಇಬ್ಬರು ಸಾಧ್ವಿಗಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಆ.28ರಂದು ಡೇರಾ ಸಚ್ಚಾ ಸೌಧಾದ ಮುಖ್ಯಸ್ಥ ಗುರ್ಮೀತ್ ಸಿಂಗ್ ಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು.
Next Story





