ಚಿಕ್ಕಮಗಳೂರು: ಸೆ.1ರಿಂದ ಮದ್ಯ ಮಾರಾಟ ನಿಷೇಧ
ಚಿಕ್ಕಮಗಳೂರು, ಆ.31: ಗೌರಿ ಗಣೇಶ ಹಬ್ಬದ ಪ್ರಯುಕ್ತ ಪ್ರತಿಷ್ಠಾಪಿಸಲ್ಪಟ್ಟಿರುವ ಗಣೇಶ ವಿಗ್ರಹಗಳನ್ನು ವಿಸರ್ಜಿಸುವ ವೇಳೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಸೇರುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮದ್ಯಪಾನ ಮಾಡಿ ಸಾರ್ವಜನಿಕರ ಶಾಂತಿಯನ್ನು ಕದಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮೂಡಿಗೆರೆ ಪಟ್ಟಣ ಮತ್ತು ಪಟ್ಟಣದ ಸುತ್ತ 10 ಕಿ.ಮೀ ವ್ಯಾಪ್ತಿಯಲ್ಲಿ ಸೆ.1 ರ ಬೆಳಗ್ಗೆ 6ರಿಂದ ಸೆ.2 ರ ಬೆಳಗ್ಗೆ 6ರವರೆಗೆ ಹಾಗೂ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರು ಪಟ್ಟಣದ ಸುತ್ತ 10 ಕಿ.ಮೀ ವ್ಯಾಪ್ತಿಯಲ್ಲಿ ಸೆ.4 ರ ಬೆಳಗ್ಗೆ 6 ರಿಂದ ಸೆ.5 ಬೆಳಗ್ಗೆ 6 ರವರೆಗೆ ಎಲ್ಲಾ ನಮೂನೆಯ ಮದ್ಯದಂಗಡಿಗಳನ್ನು ಮುಚ್ಚುವಂತೆಯೂ ಹಾಗೂ ಮದ್ಯ, ಬೀರ್, ಮದ್ಯಸಾರ ಇತ್ಯಾದಿ ಅಬಕಾರಿ ಪದಾರ್ಥಗಳ ಸಾಗಾಣಿಕೆ, ಶೇಖರಣೆ, ತಯಾರಿಕೆ, ಸರಬರಾಜು ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಜಿ.ಸತ್ಯವತಿ ಅವರು ಆದೇಶ ಹೊರಡಿಸಿದ್ದಾರೆ.