Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಂಬಿಬಿಎಸ್ ಪದವಿಗೆ ಪ್ರವೇಶ ಪ್ರಕ್ರಿಯೆ...

ಎಂಬಿಬಿಎಸ್ ಪದವಿಗೆ ಪ್ರವೇಶ ಪ್ರಕ್ರಿಯೆ ನಡೆಸಲು ಕಣಚೂರು ಸಂಸ್ಥೆಗೆ ಸುಪ್ರೀಂ ಅನುಮತಿ

ವಾರ್ತಾಭಾರತಿವಾರ್ತಾಭಾರತಿ31 Aug 2017 10:17 PM IST
share
ಎಂಬಿಬಿಎಸ್ ಪದವಿಗೆ ಪ್ರವೇಶ ಪ್ರಕ್ರಿಯೆ ನಡೆಸಲು ಕಣಚೂರು ಸಂಸ್ಥೆಗೆ ಸುಪ್ರೀಂ ಅನುಮತಿ

ಹೊಸದಿಲ್ಲಿ, ಆ.31: ಮಂಗಳೂರು ಮೂಲದ ಕಣಚೂರು ಇಸ್ಲಾಮಿಕ್ ಎಜುಕೇಶನ್ ಟ್ರಸ್ಟ್ (ಕೆಐಇಟಿ)ನ ಆಶ್ರಯದಲ್ಲಿರುವ  ದೇರಳಕಟ್ಟೆಯ ಕಣಚೂರ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಯನ್ಸ್ ಕಾಲೇಜಿಗೆ 2017-18 ಮತ್ತು 2018-19ರಲ್ಲಿ ಎಂಬಿಬಿಎಸ್ ಪದವಿಗೆ ವಿದ್ಯಾರ್ಥಿಗಳಿಗೆ ಪ್ರವೇಶ ಪ್ರಕ್ರಿಯೆ ನಡೆಸದಂತೆ ಕೇಂದ್ರ ಸರಕಾರ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಕೇಂದ್ರ ಸರಕಾರದ ಆದೇಶವನ್ನು ಪ್ರಶ್ನಿಸಿ ಹಾಗೂ 2017-18ರ ಸಾಲಿನ ಎಂಬಿಬಿಎಸ್ ಪ್ರವೇಶದ ಅಂತಿಮ ದಿನಾಂಕವನ್ನು ಸೆಪ್ಟೆಂಬರ್ 5ರವರೆಗೆ ವಿಸ್ತರಿಸಬೇಕು ಎಂಬ ಮನವಿಯನ್ನು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರ ನೇತೃತ್ವದ ನ್ಯಾಯಾಲಯ ಪೀಠ ಪುರಸ್ಕರಿಸಿದೆ.

ಅಲ್ಲದೆ, ನಿಜವಾಗಿಯೂ ಅಗತ್ಯವಿದ್ದರೆ ಮಾತ್ರ ಸಂಸ್ಥೆಯ ಪರಿಶೀಲನೆ ನಡೆಸುವಂತೆ ನ್ಯಾಯಾಲಯ ಪೀಠವು ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ(ಎಂಸಿಐ)ಕ್ಕೆ ಸೂಚಿಸಿತು. ಕೆಐಇಟಿಯಲ್ಲಿ ಪರಿಶೀಲನೆ ನಡೆಸಿದ ಸಂದರ್ಭ ಕೆಲವು ಮೂಲಭೂತ ಸೌಕರ್ಯದ ಕೊರತೆ ಇತ್ತು ಎಂದು ಈ ಹಿಂದೆ ಎಂಸಿಐ ನೀಡಿದ ವರದಿಯ ಆಧಾರದಲ್ಲಿ , 2017-18 ಮತ್ತು 18-19ರಲ್ಲಿ ವಿದ್ಯಾರ್ಥಿಗಳನ್ನು ಎಂಬಿಬಿಎಸ್ ಪದವಿಗೆ ದಾಖಲಾತಿ ಮಾಡಿಕೊಳ್ಳದಂತೆ ದೇರಳಕಟ್ಟೆಯಲ್ಲಿರುವ ಕಣಚೂರು ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಯನ್ಸಸ್ ಆ್ಯಂಡ್ ರಿಸರ್ಚ್ ಸೆಂಟರ್‌ಗೆ ಕೇಂದ್ರ ಸರಕಾರ ಸೂಚಿಸಿತ್ತು.

 ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಮೂಲಭೂತ ಸೌಕರ್ಯದ ಕೊರತೆಯ ಬಗ್ಗೆ ಯಾವುದೇ ಸಮರ್ಥನೀಯ ದಾಖಲೆ ನೀಡಲು ಪ್ರತಿವಾದಿ(ಕೇಂದ್ರ ಆರೋಗ್ಯ ಇಲಾಖೆ ಮತ್ತು ಎಂಸಿಐ) ವಿಫಲವಾಗಿದೆ.

ಪ್ರತಿವಾದಿಗಳ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿರುವ ನ್ಯೂನತೆ ಹಾಗೂ ದೋಷವನ್ನು ಗಮನಿಸಿ, ಕಣಚೂರು ಸಂಸ್ಥೆಯ ಮನವಿಯನ್ನು ಪುರಸ್ಕರಿಸಲಾಗಿದೆ ಎಂದು ನ್ಯಾಯಾಲಯ ಪೀಠ ಆದೇಶದಲ್ಲಿ ತಿಳಿಸಿದೆ.

ನ್ಯಾಯಕ್ಕೆ ಸಂದ ಜಯ

ಕಣಚೂರು ಮೆಡಿಕಲ್ ಸಯನ್ಸ್ ಕಾಲೇಜಿನ ಎಂಬಿಬಿಎಸ್ ಪದವಿ ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿ ಕೇಂದ್ರ ಸರಕಾರ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸುವ ಮೂಲಕ ನಮಗೆ ನ್ಯಾಯ ಸಿಕ್ಕಿದಂತಾಗಿದೆ. ಇದು ಜನರಿಗೆ ನ್ಯಾಯಾಲಯದ ಮೇಲಿನ ಇದ್ದ ಭರವಸೆಯನ್ನು ಇಮ್ಮಡಿಗೊಳಿಸಿದೆ ಎಂದು ಕಣಚ್ಚೂರ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಹಾಜಿ ಯು.ಕೆ.ಮೋನು ಪ್ರತಿಕ್ರಿಯೆ ನೀಡಿದ್ದಾರೆ.

ನ್ಯಾಯಾಲಯದ ತೀರ್ಪಿನಿಂದ ಹರ್ಷವಾಗಿದೆ. ಸಂಸ್ಥೆಯು ಕಳೆದ ನಾಲ್ಕು ವರ್ಷಗಳಿಂದ ವಿವಿಧ ಮೂಲಭೂತ ಸೌಲಭ್ಯಗಳ ಸಹಿತ ಉತ್ತಮ ವ್ಯವಸ್ಥೆಯನ್ನು ಹೊಂದಿದೆ. ಇದನ್ನು ಪರಿಗಣಿಸಿ ನ್ಯಾಯಾಲಯವು ತೀರ್ಪು ನೀಡಿದೆ ಎಂದವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X