Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಲೂಸಿಯಾನಕ್ಕೆ ಕಾಲಿಟ್ಟ ‘ಹಾರ್ವೆ’

ಲೂಸಿಯಾನಕ್ಕೆ ಕಾಲಿಟ್ಟ ‘ಹಾರ್ವೆ’

ಟೆಕ್ಸಾಸ್‌ನಲ್ಲಿ ಕನಿಷ್ಠ 35 ಸಾವು, ಸಾವಿರಾರು ನಿರಾಶ್ರಿತರು

ವಾರ್ತಾಭಾರತಿವಾರ್ತಾಭಾರತಿ31 Aug 2017 10:18 PM IST
share
ಲೂಸಿಯಾನಕ್ಕೆ ಕಾಲಿಟ್ಟ ‘ಹಾರ್ವೆ’

ಹ್ಯೂಸ್ಟನ್, ಆ. 31: ಅಮೆರಿಕದ ಟೆಕ್ಸಾಸ್‌ನಲ್ಲಿ ಭಾರೀ ದಾಂಧಲೆ ನಡೆಸಿದ ಚಂಡಮಾರುತ ‘ಹಾರ್ವೆ’ ಬುಧವಾರ ಲೂಸಿಯಾನಕ್ಕೆ ಕಾಲಿಟ್ಟಿದೆ. ಚಂಡಮಾರುತದ ಪ್ರಭಾವದಿಂದಾಗಿ ಅಲ್ಲಿ ಭಾರೀ ಮಳೆಯಾಗುತ್ತಿದೆ.

ಇದಕ್ಕೂ ಮುನ್ನ ಟೆಕ್ಸಾಸ್‌ನಲ್ಲಿ ದಾಖಲೆಯ ಮಳೆಯಾಗಿದ್ದು, ಭೀಕರ ಪ್ರವಾಹದಿಂದಾಗಿ ಕನಿಷ್ಠ 35 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಹಾಗೂ ಸಾವಿರಾರು ಮಂದಿ ಮನೆಗಳನ್ನು ತೊರೆದು ಸುರಕ್ಷಿತ ಸ್ಥಳಗಳಿಗೆ ಹೋಗಿದ್ದಾರೆ.

ಅರ್ಧ ಶತಮಾನದ ಅವಧಿಯಲ್ಲಿ ಟೆಕ್ಸಾಸ್‌ಗೆ ಅಪ್ಪಳಿಸಿದ ಅತಿ ಭೀಕರ ಚಂಡಮಾರುತ ಇದಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಕಳೆದ ಶುಕ್ರವಾರ ಚಂಡಮಾರುತ ಅಪ್ಪಳಿಸಿದಂದಿನಿಂದ 32,000ಕ್ಕೂ ಅಧಿಕ ಮಂದಿ ತಮ್ಮ ಮನೆಗಳನ್ನು ತೊರೆದು ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ.

ಹಾರ್ವೆ ಚಂಡಮಾರುತವು ಬುಧವಾರ ರಾತ್ರಿಯ ವೇಳೆಗೆ ವಾಯುಭಾರ ಕುಸಿತದ ಮಟ್ಟಕ್ಕೆ ದುರ್ಬಲಗೊಂಡಿದೆ ಎಂದು ಅಮೆರಿಕ ರಾಷ್ಟ್ರೀಯ ಚಂಡಮಾರುತ ಕೇಂದ್ರ ತಿಳಿಸಿದೆ.

ಈ ನಡುವೆ, 17 ಮಂದಿ ನಾಪತ್ತೆಯಾಗಿದ್ದಾರೆ ಎಂದು ಹ್ಯಾರಿಸ್ ಕೌಂಟಿ ಪೊಲೀಸರು ಹೇಳಿದ್ದಾರೆ. ಹ್ಯಾರಿಸ್ ಕೌಂಟಿ ವ್ಯಾಪ್ತಿಯಲ್ಲಿ ಹ್ಯೂಸ್ಟನ್ ಬರುತ್ತದೆ.

ಮೃತ ತಾಯಿಯ ಬೆನ್ನಿಗೆ ಅಂಟಿಕೊಂಡಿದ್ದ 3 ವರ್ಷದ ಮಗು

ಆಗ್ನೇಯ ಟೆಕ್ಸಾಸ್‌ನ ಕಾಲುವೆಯೊಂದರಲ್ಲಿ ಮೂರು ವರ್ಷದ ಹೆಣ್ಣು ಮಗುವೊಂದು ತನ್ನ ಮೃತ ತಾಯಿಯ ದೇಹವನ್ನು ಹಿಡಿದುಕೊಂಡು ತೇಲುತ್ತಿದ್ದ ಘಟನೆಯೊಂದು ವರದಿಯಾಗಿದೆ. ಮಗುವನ್ನು ಪೊಲೀಸರು ರಕ್ಷಿಸಿದ್ದಾರೆ.

ಮಗು ತನ್ನ ತಾಯಿಯ ಬೆನ್ನಿನಲ್ಲಿ ಕುಳಿತು ತೇಲುತ್ತಿದ್ದುದನ್ನು ಪೊಲೀಸರು ಪತ್ತೆಹಚ್ಚಿದರು.

41 ವರ್ಷದ ಮಹಿಳೆಯ ವಾಹನ ಮಂಗಳವಾರ ಮಧ್ಯಾಹ್ನ ಹೆದ್ದಾರಿ ಪಕ್ಷದ ಕಚೇರಿಯೊಂದರ ಪಾರ್ಕಿಗ್ ಸ್ಥಳದಲ್ಲಿ ಸಿಕ್ಕಿಹಾಕಿಕೊಂಡಿತ್ತು ಎನ್ನಲಾಗಿದೆ. ಮಹಿಳೆ ತನ್ನ ಮಗುವಿನೊಂದಿಗೆ ಸುರಕ್ಷಿತ ಸ್ಥಳಕ್ಕೆ ನಡೆಯುತ್ತಿದ್ದುದನ್ನು ವ್ಯಕ್ತಿಯೊಬ್ಬರು ನೋಡಿದ್ದಾರೆ.

ಆಗ ಪಾರ್ಕಿಂಗ್ ಸ್ಥಳದ ಪಕ್ಕದಲ್ಲೇ ಹರಿಯುತ್ತಿದ್ದ ಚರಂಡಿ ಕಾಲುವೆಯ ಪ್ರವಾಹವು ಅವರನ್ನು ಒಮ್ಮೆಲೆ ಕೊಚ್ಚಿಕೊಂಡು ಹೋಯಿತು. ಮಗುವನ್ನು ಬೆನ್ನಮೇಲೆ ಕೂರಿಸಿ ಮಹಿಳೆ ಈಜಲು ಪ್ರಯತ್ನಿಸಿದರು. ಸುರಕ್ಷಿತವಾಗಿ ಈಜುವ ಯತ್ನದಲ್ಲಿ ವಿಫಲರಾದರೂ, ಮಗುವನ್ನು ರಕ್ಷಿಸುವಲ್ಲಿ ಯಶಸ್ವಿಯಾದರು ಎಂದು ಪೊಲೀಸರು ಹೇಳಿದ್ದಾರೆ. ಮಗು ಆಸ್ಪತ್ರೆಯಲ್ಲಿ ಚೇತರಿಸುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X