ಮಂಗಳೂರು ಬಯಲು ಶೌಚ ಮುಕ್ತ ನಗರ..!
ಬಯಲು ಶೌಚ ಮುಕ್ತ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಂಗಳೂರು ಮಹಾನಗರ ಪಾಲಿಕೆಗೆ ಘೋಷಣಾ ಪ್ರಮಾಣ ಪತ್ರವನ್ನು ಗುರುವಾರ ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರು ಮೇಯರ್ ಕವಿತಾ ಸನಿಲ್ ಅವರಿಗೆ ಪ್ರದಾನಿಸಿದರು. ಸಚಿವ ಈಶ್ವರ್ ಬಿ. ಖಂಡ್ರೆ, ಮನಪಾ ಆಯುಕ್ತ ಮುಹಮ್ಮದ್ ನಝೀರ್ ಮತ್ತಿತರರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಈ ಹೆಗ್ಗಳಿಕೆಗೆ ಪಾತ್ರವಾಗಿರುವ ವೆೆುಸೂರು ಸಹಿತ 18 ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ಪ್ರಮಾಣ ಪತ್ರ ನೀಡಿ ಅಭಿನಂದಿಸಲಾಯಿತು.
Next Story





