ಬೈಕ್-ಲಾರಿ ಢಿಕ್ಕಿ: ವಿದ್ಯಾರ್ಥಿ ಮೃತ್ಯು
ಕಾಸರಗೋಡು, ಸೆ.1: ಬೈಕ್ ಮತ್ತು ಕಂಟೈನರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಕಾಸರಗೋಡು ನಿವಾಸಿ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತಪಟ್ಟ ಘಟನೆ ಪಂಜಾಬ್ ನ ಪಗ್ವಾರ ಎಂಬಲ್ಲಿ ಬುಧವಾರ ಸಂಜೆ ನಡೆದಿದೆ.
ಪಿಲಿಕ್ಕೋಡು ಕನ್ನಂಗೈಯ ಪಿ.ನಂದ ಕಿಶೋರ್ (೨೦) ಮೃತ ವಿದ್ಯಾರ್ಥಿ.
ಈತ ಪಂಜಾಬ್ನ ಲವ್ಲಿ ಪ್ರೊಫೆಷನಲ್ ವಿಶ್ವವಿದ್ಯಾನಿಲಯದಲ್ಲಿ 3ನೆ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದರು.
ಗಂಭೀರ ಗಾಯಗೊಂಡ ನಂದ ಕಿಶೋರ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತದೇಹವನ್ನು ಊರಿಗೆ ತರಲಾಗುವುದೆಂದು ಕುಟುಂಬ ಮೂಲಗಳು ತಿಳಿಸಿವೆ.
Next Story