ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ‘ಅತ್ಯುತ್ತಮ ಸಹಕಾರ ಸಂಘ’ ಪ್ರಶಸ್ತಿ
ಪುತ್ತೂರು, ಸೆ. 2: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ನೀಡುವ 2016-17ರ ಸಾಲಿನ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿಗೆ ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಾಣಿಯೂರು ಆಯ್ಕೆಯಾಗಿದೆ.
ಸಂಘ ಸಲ್ಲಿಸಿದ ಗಣನೀಯ ಸೇವೆ, ಕಾರ್ಯನಿರ್ವಹಣೆ, ಲೆಕ್ಕ ಪರಿಶೋಧನಾ ವರ್ಗೀಕರಣದಲ್ಲಿ ‘ಎ’ ಶ್ರೇಣಿ ಸಾಧನೆ ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆ. ಸೆ.1ರಂದು ಮಂಗಳೂರಿನ ಡಿಸಿಸಿ ಬ್ಯಾಂಕ್ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರಕುಮಾರ್ ಅವರು ಚಾರ್ವಾಕ ಸಂಘದ ಅಧ್ಯಕ್ಷ ಧರ್ಮೇಂದ್ರ ಕಟ್ಟತ್ತಾರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶೋಕ್ ಗೌಡ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ. ಜಯರಾಮ ರೈ, ಚಾರ್ವಾಕ ಸಂಘದ ನಿರ್ದೇಶಕರಾದ ಪಟೇಲ್ ಗೋಪಾಲಕೃಷ್ಣ ಗೌಡ, ಪದ್ಮಯ್ಯ ಗೌಡ ಅನಿಲ, ದೇವಿಪ್ರಸಾದ್ ದೋಳ್ಪಾಡಿ, ವಲಯ ಮೇಲ್ವಿಚಾರಕ ವಸಂತ ಎಸ್. ಉಪಸ್ಥಿತರಿದ್ದರು.