ಬೆಂಗಳೂರು: ಕಾರು ಢಿಕ್ಕಿ - ವೃದ್ಧೆ ಸಾವು

ಬೆಂಗಳೂರು, ಆ.2: ಚರ್ಚ್‌ಗೆ ಹೋಗಿ ಪ್ರಾರ್ಥನೆ ಮುಗಿಸಿಕೊಂಡು ಮನೆಗೆ ವಾಪಾಸ್ಸಾಗುತ್ತಿದ್ದಾಗ ಕಾರೊಂದು ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ವೃದ್ಧೆಯೊಬ್ಬರು ಮೃತಪಟ್ಟಿರುವ ಘಟನೆ ಮತ್ತಿಕೆರೆಯಲ್ಲಿ ನಡೆದಿದೆ.
ಮೃತರನ್ನು ಮತ್ತಿಕೆರೆಯ ನಿವಾಸಿ ಅಲೆಯಮ್ಮಾ ಜಾಕಬ್(74) ಎಂದು ಗುರುತಿಸಲಾಗಿದೆ. ಶನಿವಾರ ಬೆಳಗ್ಗೆ ಅವರು ಮನೆಯ ಹತ್ತಿರದ ಚರ್ಚ್‌ಗೆ ಹೋಗಿ ಮನೆಗೆ ನಡೆದುಕೊಂಡು ಬರುತ್ತಿದ್ದಾಗ ಹಿಂದಿನಿಂದ ಬಂದ ಕಾರೊಂದು ಢಿಕ್ಕಿ ಹೊಡೆದಿದೆ.
ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಮೊಕದ್ದಮೆ ದಾಖಲಿಸಿಕೊಂಡಿರುವ ಯಶವಂತಪುರ ಠಾಣಾ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Next Story





