ಎಸ್.ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿ ಪ್ರದಾನ

ಮಂಡ್ಯ, ಸೆ.2: ಜನದನಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ನಗರದ ರೈತ ಸಭಾಂಗಣದಲ್ಲಿ ಶುಕ್ರವಾರ ಸಂಜೆ ದೇವಮ್ಮ ಇಂಡುವಾಳು ಎಚ್. ಹೊನ್ನಯ್ಯ, ಇಂಡುವಾಳು ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿ ಪ್ರದಾನ ಮತ್ತು ಶಾರದಮ್ಮ ಕೆಂಪಮ್ಮ ವಿದ್ಯಾರ್ಥಿ ಪುರಸ್ಕಾರ ಸಮಾರಂಭ ನಡೆಯಿತು.
ಜನವಾದಿ ಮಹಿಳಾ ಸಂಘಟನೆ ಜಿಲ್ಲಾಧ್ಯಕ್ಷ ದೇವಿ ಮತ್ತು ಪ್ರೇರಣಾ ವಿಶೇಷ ಚೇತನರ ಟ್ರಸ್ಟ್‍ನ ರವಿಕುಮಾರ್ ಅವರಿಗೆ ದೇವಮ್ಮ ಮತ್ತು ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿ ಪ್ರದಾನಿಸಲಾಯಿತು. ವಿದ್ಯಾರ್ಥಿಗಳಾದ ವಿ.ಕೆ. ಶ್ರೀಕಲಾ, ಬಿ.ಪಿ.ಮದನ್. ಸಿ.ಎಸ್. ಭುವನೇಶ್, ಬಿ.ಎಸ್.ಕವನ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಪ್ರಶಸ್ತಿ ಪ್ರದಾನಿಸಿದ ವಿಧಾನಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಮಾತನಾಡಿ, ಬಹುಸಂಖ್ಯಾತ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಕೆ.ವಿ.ಶಂಕರಗೌಡ, ಎಚ್.ಹೊನ್ನಯ್ಯ, ಎಚ್.ಕೆ.ವೀರಣ್ಣಗೌಡ, ಎಸ್.ಸಿ.ಮಲ್ಲಯ್ಯರಂತಹವರು ಅಪಾರ ಕೊಡುಗೆ ನೀಡಿದ್ದಾರೆ ಎಂದರು.
ವಿಧಾನಪರಿಷತ್ ಸದಸ್ಯ ಡಿ.ಎಸ್.ವೀರಯ್ಯ, ಮಾಜಿ ಶಾಸಕ ಎಂ.ಶ್ರೀನಿವಾಸ್, ಜನದನಿ ಸಂಸ್ಕೃತಿಕ ಟ್ರಸ್ಟ್ ಸಂಸ್ಥಾಪಕ ಪ್ರೊ.ಬಿ.ಜಯಪ್ರಕಾಶಗೌಡ, ಅಧ್ಯಕ್ಷ ಕೆ.ಎಸ್.ಜಯರಾಮು, ಕಾರ್ಯದರ್ಶಿ ಎಸ್.ಡಿ. ಸೋಮಶೇಖರ್, ಎಂ.ಕೆ.ಹರೀಶ್, ಇತರ ಗಣ್ಯರು ಉಪಸ್ಥಿತರಿದ್ದರು.







