ಕಾರು-ಆಟೋ ಢಿಕ್ಕಿ: ರಿಕ್ಷಾ ಚಾಲಕ ಮೃತ್ಯು
ಉಡುಪಿ, ಸೆ.2: ಹಿರಿಯಡ್ಕದಿಂದ ಮಣಿಪಾಲ ಕಡೆಗೆ ಅತಿವೇಗವಾಗಿ ಬರುತ್ತಿದ್ದ ಕಾರೊಂದು ಆಟೋರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ.
ರಿಕ್ಷಾ ಚಾಲಕ ಜಯಕರ ಶೆಟ್ಟಿ ತಲೆಗೆ, ಕಾಲಿಗೆ ತೀವ್ರ ಗಾಯವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದ್ದಾರೆ. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





