ಧಾರಾಕಾರ ಮಳೆಗೆ ಬೆಂಗಳೂರು ತತ್ತರ
ಬೆಂಗಳೂರಿನಲ್ಲಿ ಕಳೆದ ಎರಡು ವಾರಗಳಿಂದ ಕಣ್ಣಾಮುಚ್ಚಾಲೆ ಆಡುತ್ತಿದ್ದ ಮಳೆ ಶುಕ್ರವಾರ ಮಧ್ಯರಾತ್ರಿ ಅಬ್ಬರಿಸಿ ಸುರಿದಿದೆ. ಸಿಡಿಲು ಗುಡುಗು ಸಹಿತ ಸುರಿದ ಧಾರಾಕಾರ ಮಳೆ ಉದ್ಯಾನನಗರಿಯ ನಿವಾಸಿಗಳ ನಿದ್ದೆಗೆಡಿಸಿದೆ. ಶುಕ್ರವಾರ ರಾತ್ರಿ 1 ಗಂಟೆಯಿಂದ ಬೆಳಗ್ಗೆ 9 ಗಂಟೆಯವರೆಗೆ ಸುರಿದ ಮಹಾಮಳೆಗೆ ನಗರದ ನಾನಾ ಭಾಗಗಳು ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಸಂಪಂಗಿರಾಮನಗರ, ಮಲ್ಲೇಶ್ವರಂ, ಜೆ.ಸಿ.ನಗರ, ಆರ್.ಟಿ.ನಗರ, ಎಎಚ್‌ಎಸ್‌ಆರ್ ಲೇಔಟ್, ಮೆಜೆಸ್ಟಿಕ್, ಕಲಾಸಿಪಾಳ್ಯ, ಬಾಪೂಜಿ ನಗರ, ಚಾಮರಾಜಪೇಟೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಹಾಮಳೆಗೆ ಜನ ತತ್ತರಿಸಿಹೋಗಿದ್ದಾರೆ.
Next Story





