Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಸಿರು ಶಿಷ್ಟಾಚಾರದಿಂದ ದಾಂಪತ್ಯಕ್ಕೆ...

ಹಸಿರು ಶಿಷ್ಟಾಚಾರದಿಂದ ದಾಂಪತ್ಯಕ್ಕೆ ಕಾಲಿಟ್ಟ ಜೋಡಿ

ವಾರ್ತಾಭಾರತಿವಾರ್ತಾಭಾರತಿ3 Sept 2017 4:17 PM IST
share
ಹಸಿರು ಶಿಷ್ಟಾಚಾರದಿಂದ ದಾಂಪತ್ಯಕ್ಕೆ ಕಾಲಿಟ್ಟ ಜೋಡಿ

ಉಡುಪಿ, ಸೆ. 3: ಉಡುಪಿ ಜಿಲ್ಲೆಯ ಉಚ್ಚಿಲದ ಶ್ರೀಮತಿ ತುಂಬೆ ಕರ್ಕೆರಾ ಸಭಾಭವನದಲ್ಲಿ ರವಿವಾರ ನಡೆದ ಸುಧಾಕರ ಮತ್ತು ಹರಿಣಾಕ್ಷಿ ಅವರ ವಿವಾಹ ಹೊಸ ದಾಖಲೆಗೆ ಪಾತ್ರವಾಯಿತು.

ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಅವರ ನೇತೃತ್ವದಲ್ಲಿ ಹಸಿರು ಶಿಷ್ಟಾಚಾರ ಪಾಲಿಸಿ ಆಚರಿಸಿ ನಡೆದ ವಿವಾಹ ಕಾರ್ಯಕ್ರಮ ಈ ದಾಖಲೆಗೆ ಸಾಕ್ಷಿಯಾಯಿತು ಹಾಗೂ ಪ್ರತಿಯೊಬ್ಬರಿಗೂ ಮಾದರಿಯಾಯಿತು.

ಸುಮಾರು 700 ಮಂದಿ ಭಾಗವಹಿಸಿದ್ದ ಈ ವಿವಾಹ ಕಾರ್ಯಕ್ರಮದಲ್ಲಿ ಆಮಂತ್ರಣ ಪತ್ರಿಕೆಯಿಂದ ಊಟದ ವ್ಯವಸ್ಥೆಯ ವರೆಗೂ ಎಲ್ಲಿಯೂ ಪಾಸ್ಟಿಕ್ ಬಳಕೆ ಕಂಡುಬರಲಿಲ್ಲ ಅಲ್ಲದೇ ಮದುವೆಯ ನಂತರ ಪರಿಸರಕ್ಕೆ ಹಾನಿಯಾಗುವ ಯಾವುದೇ ತ್ಯಾಜ್ಯ ಉತ್ಪತ್ತಿಯಾಗದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ವಹಿಸಲಾಗಿದ್ದಿತ್ತು.

ಮದುವೆ ಮಂಟಪಕ್ಕೆ ಬಟ್ಟೆಯಿಂದ ತಯಾರಿಸಿದ ಹೂ ಮತ್ತು ನೈಸರ್ಗಿಕ ಹೂ ಗಳನ್ನೇ ಬಳಸಲಾಗಿತ್ತು, ಕುಡಿಯಲು ಸ್ಟೀಲ್ ಲೋಟಗಳು ಮತ್ತು ಊಟಕ್ಕೆ ಪಿಂಗಾಣಿ ಪ್ಲೇಟ್ ಗಳನ್ನು ಬಳಸಲಾಗಿದ್ದಿತು.

ಈ ವಿವಾಹದಲ್ಲಿ ಪಾಸ್ಟಿಕ್ ಬಳಕೆ ಮತ್ತು ತ್ಯಾಜ್ಯ ಸೃಷ್ಠಿಸುವ ವಸ್ತುಗಳ ಬಳಕೆ ಮಾಡುವುದರ ಕುರಿತು ಪರಿಶೀಲಿಸುವ ಉದ್ದೇಶದಿಂದ ಇಬ್ಬರು ಪಿಡಿಒಗಳು ಪರಿಶೀಲನೆಗೆ ಅಗಮಿಸಿದ್ದು, ಈ ಬಗ್ಗೆ ಸಂಪೂರ್ಣ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ್ದು, ವರದಿ ಪರಿಶೀಲಿಸಿದ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನಿಸ್ ಖುದ್ದಾಗಿ ವಿವಾಹದ ಸಭಾ ಭವನಕ್ಕೆ ಆಗಮಿಸಿ ವಧೂ ವರರನ್ನು ಅಭಿನಂದಿಸಿದರು.

ನಂತರ ಮಾತನಾಡಿದ ಜಿಲ್ಲಾಧಿಕಾರಿ, ಸ್ವಚ್ಛ ಉಡುಪಿ ಮಿಷನ್ ಅಂಗವಾಗಿ ಜಿಲ್ಲೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ಎಲ್ಲಾ ಯುವಕ ಮಂಡಳಗಳಿಗೆ ತಮ್ಮ ವ್ಯಾಪ್ತಿಯಲ್ಲಿ ಸಮರ್ಪಕ ತ್ಯಾಜ್ಯ ವಿಲೇವಾರಿ ಬಗ್ಗೆ ಮಾಹಿತಿ ನೀಡಿದ್ದು, ಅದರಂತೆ ನವಚೇತನ ಯುವಕ ಮಂಡಲ ಮತ್ತು ನವಚೇತನ ಯುವತಿ ಮಂಡಲ ಕಟ್ಟೆಗುಡ್ಡೆ ಇದರ ಸಂಘದ ಸದಸ್ಯ ಸುಧಾಕರ ಅವರ ವಿವಾಹವನ್ನು ಪ್ಲಾಸ್ಟಿಕ್ ರಹಿತವಾಗಿ ಮಾಡಿ, ಎಲ್ಲರಿಗೂ ಮಾದರಿಯಾಗುವುದಾಗಿ ಜಿ.ಪಂ. ಅಧ್ಯಕ್ಷ ದಿನಕರ ಬಾಬು ತಿಳಿಸಿದ್ದರು. ಅದರಂತೆ ಇಂದು ವಿವಾಹ ನಡೆದಿದೆ ಇದು ಪ್ರತಿಯೊಬ್ಬರಿಗೂ ಮಾದರಿಯಾಗಬೇಕು ಎಂದು ತಿಳಿಸಿದರು.

ಈ ವಿವಾಹ ಕಾರ್ಯಕ್ರಮಕ್ಕೆ ಕ್ಯಾಟರಿಂಗ್ ವ್ಯವಸ್ಥೆ ಮಾಡಿದ್ದ ಉಡುಪಿ ಅಂಬಾಗಿಲು ನ ಎಕ್ಸಲೆಂಟ್ ಕ್ಯಾಟರರ್ ನ ದೀಕ್ಷಿತ್ ಶೆಟ್ಟಿ ಅವರನ್ನು ಅಭಿನಂದಿಸಿದ ಜಿಲ್ಲಾಧಿಕಾರಿ, ಮುಂದೆಯೂ ಎಲ್ಲಾ ವಿವಾಹಗಳಲ್ಲಿ ಇದೇ ಮಾದರಿಯಲ್ಲಿ ಪ್ಲಾಸ್ಟಿಕ್ ಬಳಕೆ ರಹಿತವಾಗಿ ಪರಿಸರಕ್ಕೆ ಪೂರಕವಾಗಿರುವ ವಸ್ತುಗಳನ್ನು ಬಳಸಿ ಆಹಾರ ಸರಬರಾಜು ಮಾಡುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಹಸಿರು ಶಿಷ್ಟಾಚಾರ ಪಾಲಿಸಿ, ಪ್ಲಾಸ್ಟಿಕ್ ಬಳಕೆ ಮಾಡದೆ ವಿವಾಹವಾಗುವ ಎಲ್ಲಾ ದಂಪತಿಗಳಿಗೆ, ಅಂತಹ ಸಭಾ ಭವನಗಳ ಮುಖ್ಯಸ್ಥರಿಗೆ ಹಾಗೂ ಆಹಾರ ತಯಾರಿಕೆ/ಸರಬರಾಜು ಮಾಡುವವರಿಗೆ ಜಿಲ್ಲಾಡಳಿದ ವತಿಯಿಂದ ಅಭಿನಂದನಾ ಪತ್ರಗಳನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಉಡುಪಿ ಜಿಲ್ಲೆಯನ್ನು 2018 ರ ಅಕ್ಟೋಬರ್ 2 ರ ಒಳಗೆ ತ್ಯಾಜ್ಯ ಮುಕ್ತ ಜಿಲ್ಲೆಯನ್ನಾಗಿಸಲು ಸ್ವಚ್ಛ ಉಡುಪಿ ಮಿಷನ್ ವರ್ಷದ ಕೌಂಟ್ ಡೌನ್ ಕಾರ್ಯಕ್ರಮ ಈಗಾಗಲೇ ಪ್ರಾರಂಭಗೊಂಡಿದ್ದು, ಇಂದು ನಡೆದ ಈ ವಿವಾಹ ಕಾರ್ಯಕ್ರಮ ಎಲ್ಲರಿಗೂ ಪ್ರೇರಣೆ ನೀಡಿದೆ.

ವಿವಾಹ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಉಡುಪಿ ತಾ.ಪಂ. ಸಹಾಯಕ ನಿರ್ದೇಶಕ ಹರಿಕೃಷ್ಣ ಶಿವತ್ತಾಯ, ಸ್ವಚ್ಛ ಭಾರತ್ ಅಭಿಯಾನದ ಜಿಲ್ಲಾ ಸಮಾಲೋಚಕ ಸುಧೀರ್, ಪಿಡಿಒ ಗಳಾದ ರಮಾನಂದ ಪುರಾಣಿಕ್, ಸಿದ್ದೇಶ್ ಹಾಗು ಇತರರು ಈ ಸಂದರ್ಭ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X