Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರೋಗಿ-ವೈದ್ಯರ ನಡುವಿನ ಸಂಬಂಧ...

ರೋಗಿ-ವೈದ್ಯರ ನಡುವಿನ ಸಂಬಂಧ ಗಟ್ಟಿಗೊಳ್ಳಬೇಕಿದೆ: ಜಯರಾಮ್ ಭಟ್

ರಾಜ್ಯ ಮಟ್ಟದ ಯುವ ಕಸೋಗ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ3 Sept 2017 7:47 PM IST
share

 ಮಂಗಳೂರು, ಸೆ.3: ರೋಗಿಗಳು ವೈದ್ಯರ ಮೇಲಿಟ್ಟಿರುವ ನಂಬಿಕೆಯಂತೆ ವೈದ್ಯರು ಅದಕ್ಕೆ ಪೂರಕವಾಗಿ ಸ್ಪಂದಿಸಬೇಕು. ವೈದ್ಯರು ರೋಗಿಗಳ ಕುರಿತು ಕಾಳಜಿ, ಸಹಾನುಭೂತಿ ವ್ಯಕ್ತಪಡಿಸುವುದರೊಂದಿಗೆ ರೋಗಿ ಮತ್ತು ವೈದ್ಯರ ನಡುವಿನ ಸಂಬಂಧ ಗಟ್ಟಿಗೊಳ್ಳಬೇಕಿದೆ ಎಂದು ಕರ್ಣಾಟಕ ಬ್ಯಾಂಕ್ ಅಧ್ಯಕ್ಷ ಪಿ. ಜಯರಾಮ್ ಭಟ್ ಹೇಳಿದರು

ಕರ್ನಾಟಕ ರಾಜ್ಯ ಪ್ರಸೂತಿ ಮತ್ತು ಸೀರೋಗ ಶಾಸ ಸಂಘದ ಆಶ್ರಯದಲ್ಲಿ ನಗರದ ಫಾದರ್ ಮುಲ್ಲರ್ ವೈದ್ಯಕೀಯ ಕ್ಯಾಂಪಸ್‌ನಲ್ಲಿ ಶನಿವಾರ ನಡೆದ ಮಂಗಳೂರು ಪ್ರಸೂತಿ ಶಾಸ್ತ್ರ ಮತ್ತು ಸೀರೋಗ ಶಾಸ್ತ್ರ ಸಮಾಜದ ರಾಜ್ಯಮಟ್ಟದ ಪ್ರಥಮ ಸಮ್ಮೇಳನ ಹಾಗೂ ಕಾರ್ಯಾಗಾರ ‘ಯುವ ಕಸೋಗ- 2017’ ಉದ್ಘಾಟಿಸಿ ಅವರು ಮಾತನಾಡಿದರು.

ವೈದ್ಯರು ಎಂದಿಗೂ ರೋಗಿಗಳ ನಂಬಿಕೆಯನ್ನು ಮುರಿಯುವಂತಹ ಕಾರ್ಯಕ್ಕೆ ಇಳಿಯಬಾರದು. ಇತ್ತೀಚಿನ ದಿನಗಳಲ್ಲಿ ರೋಗಿ ಹಾಗೂ ವೈದ್ಯರ ನಡುವಿನ ಸಂಬಂಧ ಶಿತಿಲಗೊಳ್ಳುತ್ತಿವೆ. ಅದನ್ನು ದೂರ ಮಾಡುವ ಅಗತ್ಯವಿದೆ ಎಂದ ಜಯರಾಮ್ ಭಟ್, ವೈದ್ಯರು ರೋಗಿಗಳಿಗೆ ಚಿಕಿತ್ಸೆ ಕೊಡುವಾಗ ಅವರ ಸುರಕ್ಷತೆಯ ಕಡೆಗೆ ಹೆಚ್ಚಿನ ಮಹತ್ವ ನೀಡಲು ಆದ್ಯತೆ ನೀಡಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಫಾದರ್ ಮುಲ್ಲರ್ ಚಾರಿಟೇಬಲ್ ಇನ್‌ಸ್ಟಿಟ್ಯೂಟ್‌ನ ನಿರ್ದೇಶಕ ರೆ. ಫಾ. ರಿಚರ್ಡ್ ಅಲೋಶಿಯಸ್ ಕುವೆಲ್ಲೋ ಕಲಿಕೆ ಒಂದು ದಿನದಲ್ಲಿ ಮುಗಿಯುವಂತದ್ದಲ್ಲ. ಅದೊಂದು ನಿರಂತರವಾದ ಕಾರ್ಯ. ಇಂತಹ ಕಾರ್ಯಾಗಾರದ ಮೂಲಕ ಯುವ ವೈದ್ಯ ವಿದ್ಯಾರ್ಥಿಗಳು ಸಾಕಷ್ಟು ಕಲಿತು ಸಮಾಜಕ್ಕೆ ಉತ್ತಮವಾದ ಕೊಡುಗೆ ನೀಡಬೇಕು. ಹೊಸ ತಂತ್ರಜ್ಞಾನ, ವಿನೂತನ ಚಿಕಿತ್ಸಾ ವಿಧಾನಗಳ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಬೇಕು ಎಂದರು.

ಕಸೋಗದ ಅಧ್ಯಕ್ಷ ವಿದ್ಯಾ ಭಟ್ ಮಾತನಾಡಿ ರಾಜ್ಯದ 20 ಜಿಲ್ಲೆಗಳಲ್ಲಿ ಕಸೋಗ ಸಂಘಟನೆಯಿದ್ದು, ಸುಮಾರು 2 ಸಾವಿರಕ್ಕೂ ಅಧಿಕ ಪ್ರತಿನಿಧಿಗಳಿದ್ದಾರೆ. ರಾಜ್ಯದಲ್ಲಿ ಮೊದಲ ಬಾರಿಗೆ ಯುವ ಕಸೋಗ ಕಾರ್ಯಾಗಾರ ಮಂಗಳೂರಿನಲ್ಲಿ ನಡೆದಿದೆ. ಮುಂದಿನ ಯುವ ಕಸೋಗ ಬೆಳಗಾವಿಯಲ್ಲಿ ನಡೆಯಲಿದೆ ಎಂದರು.

ಈ ಸಂದರ್ಭ ಕಸೋಗದ ಗೌರವ ಕಾರ್ಯದರ್ಶಿ ಡಾ. ಶೋಭನಾ ಪಟ್ಟಾಡೆ, ಡಾ. ಅಣ್ಣಯ್ಯ ಕುಲಾಲ್ ಉಪಸ್ಥಿತರಿದ್ದರು. ಸಂಘಟನಾ ಅಧ್ಯಕ್ಷ ಡಾ. ಪ್ರೇಮಾ ಡಿಕುನ್ಹ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ಡಾ. ವತ್ಸಲಾ ಕಾಮತ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X