ಡಿವೈಎಫ್‌ಐ ಸಮ್ಮೇಳನದ ಲಾಂಛನ ಬಿಡುಗಡೆ

ಮಂಗಳೂರು, ಸೆ.3: ನಗರದಲ್ಲಿ ಸೆ.17ರಂದು ನಡೆಯುವ ಡಿವೈಎಫ್‌ಐ 13ನೆ ದ.ಕ. ಜಿಲ್ಲಾ ಸಮ್ಮೇಳನದ ಲಾಂಛನವನ್ನು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಡಿವೈಎಫ್‌ಐ ಕಚೇರಿಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿದರು.
ಈ ವೇಳೆ ಡಿವೈಎಫ್‌ಐ ಜಿಲ್ಲಾಧ್ಯಕ್ಷ ದಯಾನಂದ ಶೆಟ್ಟಿ, ಕಾರ್ಯದರ್ಶಿ ಸಂತೋಷ್ ಬಜಾಲ್, ಜಿಲ್ಲಾ ಮುಖಂಡರಾದ ರಫೀಕ್ ಹರೇಕಳ, ಸಾದಿಕ್ ಕಣ್ಣೂರು, ಮನೋಜ್ ವಾಮಂಜೂರ್, ನವೀನ್ ಕೊಂಚಾಡಿ ಉಪಸ್ಥಿತರಿದ್ದರು.
Next Story





