ಕ್ರೀಡಾಪಟುಗಳು ತಮ್ಮ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ವಿಶ್ವಮಟ್ಟದಲ್ಲಿ ಗುರುತಿಸಬೇಕು: ಮಲ್ಲಿಕಾರ್ಜುನ್

ದಾವಣಗೆರೆ, ಸೆ.3: ನಗರ ಮತ್ತು ಜಿಲ್ಲೆಯ ಕ್ರೀಡಾಪಟುಗಳು ವಿಶ್ವಮಟ್ಟದಲ್ಲಿ ದಾವಣಗೆರೆಯನ್ನು ಗುರುತಿಸುವಂತಹ ಸಾಧನೆ ಮಾಡಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಆಶಿಸಿದರು.
ನಗರದಲ್ಲಿ ಜಿಲ್ಲಾ ವೇಟ್ ಲಿಫ್ಟೀಂಗ್ ಅಸೋಸಿಯೇಶನ್, ರಾಜ್ಯ ವೇಟ್ ಲಿಫ್ಟರ್ಸ್ ಅಸೋಸಿಯೇಶನ್ ಸಂಯುಕ್ತಾಶ್ರಯದಲ್ಲಿ ಮೂರುದಿನಗಳ ಕಾಲ ನಡೆಯುತ್ತಿರುವ ರಾಜ್ಯಮಟ್ಟದ 45ನೆ ಪುರುಷರ, 29ನೆ ಮಹಿಳೆಯರ ಹಿರಿಯ ಮತ್ತು ಕಿರಿಯ ವೇಟ್ ಲಿಫ್ಟೀಂಗ್ ಸ್ಫರ್ಧೆಯ ಬಹುಮಾನ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಈಗಾಗಲೇ ದಾವಣಗೆರೆ ನಗರ ಮತ್ತು ಜಿಲ್ಲೆಯ ಕ್ರೀಡಾಪಟುಗಳು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಹೆಸರು ಗಳಿಸಿದ್ದು, ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳು ತಮ್ಮ ತಮ್ಮ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ವಿಶ್ವ ಮಟ್ಟದಲ್ಲಿ ಗುರುತಿಸಲಿ ಎಂದು ಕರೆ ನೀಡಿದ ಅವರು, ಕ್ರೀಡಾಪಟುಗಳಿಗೆ ನಮ್ಮ ಪ್ರೋತ್ಸಾಹ ಸದಾ ಇರಲಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಆರ್.ಶ್ರೀನಿವಾಸ್, ಸದಸ್ಯರುಗಳಾದ ಶಿವನಳ್ಳಿ ರಮೇಶ್, ಎಚ್.ಗುರುರಾಜ್, ಎ.ನಾಗರಾಜ್, ದಾವಣಗೆರೆ ಜಿಲ್ಲಾ ವೇಟ್ ಲಿಫ್ಟೀಂಗ್ ಅಸೋಸಿಯೇಶನ್ ಅಧ್ಯಕ್ಷ ಎಚ್.ಮಹೇಶ್, ಕೆ.ಎನ್.ಹನುಮಂತಪ್ಪ, ಹೆಚ್.ಬಸವರಾಜ್, ವಿರೇಶ್ ಪೈಲ್ವಾನ್, ಮತ್ತಿತರರು ಉಪಸ್ಥಿತರಿದ್ದರು.







