ಬಾಗೇಪಲ್ಲಿ : ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆ

ಬಾಗೇಪಲ್ಲಿ,ಸೆ.4: 2018ರ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ 150 ಸ್ಥಾನಗಳನ್ನು ಪಡೆದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗುವುದು ಖಚಿತ ಎಂದು ಜಿಲ್ಲಾ ಉಸ್ತುವಾರಿ ಸಚ್ಚಿದಾನಂದಮೂರ್ತಿ ಭವಿಷ್ಯ ನುಡಿದರು.
ಪಟ್ಟಣದ ಗಾನ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಚಾಲನೆ ನೀಡಿ ಮಾತನಾಡಿದ ಅವರು 2018ರ ವಿಧಾನ ಸಭೆ ಚುನಾವಣೆಯಲ್ಲಿ ಕಾಗ್ರೇಸ್ ಮುಕ್ತ ರಾಜ್ಯವನ್ನಾಗಿಸಲು ಹಾಗೂ ಪಕ್ಷ ಹೊಂದಿರುವ 150 ಸ್ಥಾನಗಳ ಗುರಿಯನ್ನು ಸಾಧಿಸಲು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಪಣ ತೊಡಬೇಕೆಂದು ಎಂದು ಕರೆ ನೀಡಿದ ಅವರು ಈ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಕ್ಕಬಳ್ಳಾಪುರ, ಬಾಗೇಪಲ್ಲಿ ಹಾಗೂ ಗೌರಿಬಿದನೂರು ವಿಧಾನ ಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದ ಅವರು ಸೈದ್ಯಾತಿಕ ನೆಲೆ ಇರುವ ಬಾಗೇಪಲ್ಲಿ ಸಿಪಿಐ(ಎಂ)ನ ಕೆಲವು ಮುಖಂಡರು ನಮ್ಮ ಪಕ್ಷದ ಜೊತೆ ಮಾತುಕತೆ ನಡೆಸಿದ್ದಾರೆ ಈ ಹಿನ್ನಲೆಯಲ್ಲಿ ಬಾಗೇಪಲ್ಲಿ ವಿದಾನಸಭಾ ಕ್ಷೇತ್ರದಲ್ಲಿ ಗೆಲ್ಲಲೇಬೇಕು ಎಂಬ ಛಲವನ್ನು ಹೊಂದಿರುವುದಾಗಿ ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸುರೇಂದ್ರಗೌಡ ಮಾತನಾಡಿ, ರಾಜ್ಯದಲ್ಲಿ ಅನೇಕ ಹಿಂದೂ ಸಂಘಟನೆಗಳ ಕಾರ್ಯಕರ್ತರ ಕಗ್ಗೊಲೆ ನಡೆಯುತ್ತಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮೌನಕ್ಕೆ ಶರಣಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು ಸಾಮಾನ್ಯ ಜನರಿಗೆ ರಕ್ಷಣೆ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು ಜಿಲ್ಲೆಯಲ್ಲಿ ಎಲ್ಲಾ ತಾಲೂಕುಗಳಲ್ಲಿ ಬೂತ್‍ಮಟ್ಟದ ಸಮಿತಿಗಳ ರಚನೆ ಬಹುತೇಕ ಪೂರ್ಣಗೊಂಡಿದೆ, ಉಳಿದ ಬೂತ್ ಸಮಿತಿಗಳನ್ನು ರಚನೆ ಮಾಡಲು ವಿಸ್ತರಕರು ಈಗಾಗಲೇ ಕಾರ್ಯನ್ಮೋಖರಾಗಿದ್ದಾರೆ.
ಪ್ರದಾನ ಮಂತ್ರಿ ನರೇಂದ್ರಮೋದಿ ರವರ ಸಾಧನೆಗಳ ಬಗ್ಗೆ ಮತದಾರರಿಗೆ ಮಾಹಿತಿ ನೀಡಿ 2018ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 150ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಲು ಪಕ್ಷದ ಕಾರ್ಯಕರ್ತರ ಕೈಯಲ್ಲಿದೆ ಎಂದ ಅವರು ಪಕ್ಷ ಯಾರಿಗೆ ಟಿಕೇಟ್ ನೀಡಿದರೂ ಸಹ ಅವರನ್ನು ಗೆಲ್ಲಿಸಲು ಶ್ರಮಿಸುವಂತೆ ತಿಳಿಸಿದರು.







